ಕುಶಾಲನಗರ: ಸಮೀಪದ ನಂಜರಾಯಪಟ್ಟಣ ಗ್ರಾಮದಲ್ಲಿ ಎಸ್‌ಎಸ್‌ಎಫ್ ಸುನ್ನಿ ಸ್ಟೂಡೆಂಟ್ ಫೆಡರೇಶನ್ ನಂಜರಾಯಪಟ್ಟಣ ಯೂನಿಟ್ ವತಿಯಿಂದ ಮಾದಕ ವ್ಯಸನ ವಿರುದ್ಧ ಜನಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಪೋಸ್ಟರ್ ಪ್ರದರ್ಶನವನ್ನು ಮಾಡಿ ಜನಜಾಗೃತಿಯನ್ನು ಮೂಡಿಸಲಾಯಿತು.

ಕಾರ್ಯಕ್ರಮವು ಎಸ್‌ಎಸ್‌ಎಫ್ ನಂಜರಾಯಪಟ್ಟಣ ಯೂನಿಟ್ ಅಧ್ಯಕ್ಷ ಮಹಮ್ಮದ್ ಫಯಾಸ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಭಾಗವಹಿಸಿ ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಎಸ್‌ಎಸ್‌ಎಫ್ ಕೈಗೊಂಡಿರುವ ಪ್ರಸ್ತುತ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದೆ. ಮಾದಕ ವ್ಯಸನದ ವಿರುದ್ಧ ಎಸ್‌ಎಸ್‌ಎಫ್ ಸಂಘಟನೆಗೆ ಗ್ರಾಮ ಪಂಚಾಯಿತಿಯ ಬೆಂಬಲ ನೀಡುವುದಾಗಿ ಸೂಚಿಸುವುದರೊಂದಿಗೆ ಸಾರ್ವಜನಿಕರಲ್ಲಿ ಜನಜಾಗೃತಿಯನ್ನು ಮೂಡಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಫ್ ನಂಜರಾಯಪಟ್ಟಣ ಯೂನಿಟ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್, ದಅವಾ ಕಾರ್ಯದರ್ಶಿ ಸ್ವಾಫಿದ್ ಅನ್ವಾರಿ ಮತ್ತು ಕಾರ್ಯದರ್ಶಿ ಅಬ್ದುಲ್ ಬಾಸಿತ್, ನಿಸಾರ್ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ಮುಳ್ಳೂರು: ಅಂರ‍್ರಾಷ್ಟಿçÃಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶನಿವಾರಸಂತೆ ಪೊಲೀಸರು ಸಾರ್ವಜನಿಕರಿಗೆ ಪಟ್ಟಣದ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ತ್ಯಜಿಸುವ ಕುರಿತಾಗಿ ಅರಿವು ಮೂಡಿಸಿದರು. ಶನಿವಾರಸಂತೆ ವೃತ್ತ ನಿರೀಕ್ಷಕ ಪರಶಿವಮೂರ್ತಿ ನೇತೃತ್ವದಲ್ಲಿ ಪೊಲೀಸರು ಮತ್ತು ವಿವಿಧ ಸಂಘ-ಸAಸ್ಥೆಗಳ ಪ್ರಮುಖರ ಜೊತೆಗೂಡಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಬಿಂಬಿಸುವ ಬ್ಯಾನರ್ ಹಿಡಿದುಕೊಂಡು ಪಟ್ಟಣದ ಬೈಪಾಸ್ ರಸ್ತೆ, ಆರ್‌ವಿ ಕಲ್ಯಾಣ ಮಂಟಪ, ಗುಡುಗಳಲೆ ಜಂಕ್ಸನ್‌ವರೆಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿರುವ ಮೂಲಕ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಮಾಡಿದರು.

ಈ ಸಂದರ್ಭ ಶನಿವಾರಸಂತೆ ಎಸ್‌ಐ ದೇವರಾಜ್, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕ ಪ್ರಮುಖರು ಇದ್ದರು.ಕುಶಾಲನಗರ: ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಘಟಕದಿಂದ ಕುಶಾಲನಗರದಲ್ಲಿ ಸರಳ ಕಾರ್ಯಕ್ರಮ ನಡೆಯಿತು.

ಕುಶಾಲನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮಕ್ಕೆ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು ಚಾಲನೆ ನೀಡಿದರು. ದುಶ್ಚಟಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ತಪ್ಪಿಸಲು ಯುವಪೀಳಿಗೆಗೆ ಸಂಘ ಸಂಸ್ಥೆಗಳು ಅರಿವು ಜಾಗೃತಿ ಮೂಡಿಸುವಂತಾಗಬೇಕೆAದು ಕರೆ ನೀಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾದಕ ಪದಾರ್ಥಗಳ ಸೇವನೆಯಿಂದ ಉಂಟಾಗುವ ಅನಾಹುತಗಳ ಬಗ್ಗೆ ಮತ್ತು ದುಶ್ಚಟಗಳಿಗೆ ಪ್ರಮುಖ ಕಾರಣಗಳನ್ನು ಒಳಗೊಂಡ ಭಿತ್ತಿ ಪತ್ರಗಳನ್ನು ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು ಬಿಡುಗಡೆಗೊಳಿಸಿದರು. ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಡಾ. ಯೋಗಿಶ್ ದಿನದ ಮಹತ್ವದ ಬಗ್ಗೆ ಮಾತನಾಡಿದರು

ಈ ಸಂದರ್ಭ ವೇದಿಕೆಯ ಉಪಾಧ್ಯಕ್ಷರುಗಳಾದ ಎಂ.ಎನ್. ಚಂದ್ರಮೋಹನ್, ಧನಂಜಯ್, ದೇವರಾಜ್, ರಂಗಸ್ವಾಮಿ ಮತ್ತು ವೇದಿಕೆಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮೀಣ ಯೋಜನೆಯ ಪ್ರತಿನಿಧಿಗಳು ಇದ್ದರು.