ಕೂಡಿಗೆ, ಜೂ. ೨೯: ಹಾರಂಗಿಯ ರಾಜ್ಯ ವಲಯದ ತೋಟಗಾರಿಕಾ ಕ್ಷೇತ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾರಂಗಿಯ ತೋಟಗಾರಿಕಾ ಕ್ಷೇತ್ರದಲ್ಲಿ ಈಗಾಗಲೇ ಮೊದಲ ೬೦ ಎಕರೆಗಳಷ್ಟು ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಪಡಿಸಲಾಗಿದೆ. ಇನ್ನುಳಿದ ೪೫ ಎಕರೆ ಪ್ರದೇಶದಲ್ಲಿ ವಿವಿಧ ತೋಟಗಾರಿಕಾ ಬೆಳೆಗಳ ಗಿಡಗಳನ್ನು ಬೆಳೆಸಲಾಗಿದೆ. ಇದರ ಜೊತೆಯಲ್ಲಿ ನೀರಾವರಿ ಸೌಲಭ್ಯದ ವ್ಯವಸ್ಥೆಗೆ ಅನುಕೂಲವಾಗಲು ನೂತನ ಮಾದರಿಯ ನೀರಿನ ಹೊಂಡದಲ್ಲಿ ನೀರು ಸಂಗ್ರಹದ ಮೂಲಕ ಕ್ಷೇತ್ರದ ಎಲ್ಲಾ ಗಿಡಗಳಿಗೆ ಹೋಗುವ ವ್ಯವಸ್ಥೆ ಮಾಡಿರುವುದನ್ನು ಶಾಸಕರು ವೀಕ್ಷಣೆ ಮಾಡಿ ಕ್ಷೇತ್ರದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕೆ.ಆರ್. ಮಂಜುಳ, ತಾಲೂಕು ಬಿಜೆಪಿ ಅಧ್ಯಕ್ಷ ಮನು ರೈ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಬಾಸ್ಕರ್ ನಾಯಕ್, ಭರತ್ ಮಾಚಯ್ಯ , ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಗ್ರಾಮ ಪಂಚಾಯಿತಿ ಸದಸ್ಯ ಮಣಿ ಸೇರಿದಂತೆ ಇನ್ನಿತರರು ಹಾಜರಿದ್ದರು.