ಮಡಿಕೇರಿ: ಕೆನರಾ ಬ್ಯಾಂಕ್‌ನ ವಲಯ ಕಚೇರಿ ವತಿಯಿಂದ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಕೊಡಗು ಜಿಲ್ಲೆಯಾದ್ಯಂತ ಸಂಕಷ್ಟದಲ್ಲಿರುವ ಜನರನ್ನು ಗುರುತಿಸಿ ೫೦೦ ಮಂದಿಗೆ, ಮಧ್ಯಾಹ್ನದ ಆಹಾರವನ್ನು ನೀಡಲಾಯಿತು.

ಈ ಸಂದರ್ಭ ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥ ಕೆ. ಸೆಂಥಿಲ್ ಕುಮಾರ್, ವಿಭಾಗೀಯ ಪ್ರಬಂಧಕರಾದ ಜಿ.ಸಿ. ಪ್ರಕಾಶ್, ಸುರೇಶ್ ವೇಗುಲ್ಲ ಹಾಜರಿದ್ದರು.ವೀರಾಜಪೇಟೆ: ಎಸ್.ವೈ.ಎಸ್. ೯೫ನೇ ಸಮಸ್ತ ಸ್ಥಾಪನ ಅಂಗವಾಗಿ ಕಲ್ಲುಬಾಣೆ ಶಾಖೆ ವತಿಯಿಂದ ವೀರಾಜಪೇಟೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹರಕ್ಷಕದಳ ಹಾಗೂ ಆರೋಗ್ಯ ಕಾರ್ಯಕರ್ತರು, ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.ವೀರಾಜಪೇಟೆ: ಕಟ್ಟಡ ಕಾರ್ಮಿಕರ ಸುರಕ್ಷಾ ಹಾಗೂ ನೈರ್ಮಲ್ಯಕರಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಹಾಕಿಕೊಂಡಿದ್ದು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡ ಕಟ್ಟಡ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹೇಳೀದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಜಿಲ್ಲಾಡಳಿತ ಮತ್ತು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಇವರ ಸಹಯೋಗದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಕಟ್ಟಡ ಕಾರ್ಮಿಕರಿಗೆ ನೈರ್ಮಲ್ಯಕರಣ ಹಾಗೂ ಸುರಕ್ಷಾ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಜಿಲ್ಲೆಯಲ್ಲಿ ೩ ಸಾವಿರಕ್ಕೂ ಅಧಿಕ ಕಟ್ಟಡ ಕಾರ್ಮಿಕರಿದ್ದಾರೆ. ಕೆಲಸದ ಸಮಯದಲ್ಲಿ ಅನಿರೀಕ್ಷತವಾಗಿ ಮೃತಪಟ್ಟರೆ ಅನುಕಂಪದ ಆಧಾರದ ಮೇಲೆ ೫ ಲಕ್ಷ ರೂಪಾಯಿಗಳನ್ನು ನೀಡುತ್ತಿದೆ. ಅಲ್ಲದೆ ಅನೇಕ ಸವಲತ್ತು ನೀಡುತ್ತಿದ್ದಾರೆ. ಯಾರು ನೋದಣಿ ಮಾಡಿಕೊಂಡಿಲ್ಲ ಅಂತವರು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ತಹಶೀಲ್ದಾರ್ ಆರ್. ಯೋಗಾನಂದ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್, ತಾಲೂಕು ಕಾರ್ಮಿಕ ಅಧಿಕಾರಿ ಜಯಣ್ಣ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ ಜೂನಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಘು ನಾಣಯ್ಯ ಉಪಸ್ಥಿತರಿದ್ದರು.ವೀರಾಜಪೇಟೆ: ಕೊಡಗು ಎಜುಕೇಷನಲ್ ಮತ್ತು ಸೋಶಿಯಲ್ ಸರ್ವಿಸ್ ಟ್ರಸ್ಟ್ನ ವತಿಯಿಂದ ಮೈತಾಡಿ ಗ್ರಾಮದಲ್ಲಿ ಕೊರೊನಾ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸುಮಾರು ೧೫ ಕುಟುಂಬಗಳಿಗೆ ಮಾರ್ಚಂಡ ಗಣೇಶ್ ಪೊನ್ನಪ್ಪ ಆಹಾರ ಪಡಿತರ ಕಿಟ್ ವಿತರಣೆ ಮಾಡಿದರು. ಈ ಸಂದರ್ಭ ಸಂಸ್ಥೆಯ ಮೂಲಕ ಮೈತಾಡಿ ಗ್ರಾಮದಲ್ಲಿನ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕಿಟ್ ವಿತರಣೆ ಸಂದರ್ಭ ಅಯ್ಯಮಂಡ ಪ್ರವೀಣ್ ಭೀಮಯ್ಯ, ಇಟ್ಟಿರ ಸಂಪತ್ ಸೋಮಯ್ಯ, ಅಯ್ಯಮಂಡ ವೇಣು ಕಾವೇರಪ್ಪ, ಚಪ್ಪಂಡ ಅರುಣ ಹಾಜರಿದ್ದರು.ನಾಪೋಕ್ಲು: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದ ಕಾಪಳ ಕಾಲೋನಿ ಸೀಲ್‌ಡೌನ್ ಆದ ಹಿನ್ನೆಲೆ ಗ್ರಾಮ ಪಂಚಾಯಿತಿ ವತಿಯಿಂದ ಕಾಲೋನಿಯನ್ನು ಸ್ಯಾನಿಟೈಸ್ ಮಾಡಿ ನಿವಾಸಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಉಪಾಧ್ಯಕ್ಷೆ ರಶೀನಾ, ಸದಸ್ಯರು ಇದ್ದರು.ಸಿದ್ದಾಪುರ: ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು. ಕಳೆದ ಎರಡೂವರೆ ವರ್ಷಗಳಿಂದ ೨೦ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ನಿವೇಶನಕ್ಕಾಗಿ ಹೋರಾಟ ನಡೆಸುತ್ತಿರುವ ವೀರಾಜಪೇಟೆ ಸಮೀಪದ ಬಾಳುಗೋಡಿಗೆ ಭೂಮಿ-ವಸತಿ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಸಮಿತಿ ಭೇಟಿ ಮಾಡಿ, ಆಹಾರದ ಕಿಟ್ ಗಳನ್ನು ವಿತರಿಸಿತು.

ಈ ಸಂದರ್ಭ ಸಮಿತಿಯ ಅಧ್ಯಕ್ಷ ಅಮೀನ್ ಮೊಹಿಸಿನ್, ಕಾರ್ಯದರ್ಶಿ ಮೊಣ್ಣಪ್ಪ ಪ್ರಮುಖರಾದ ಜಲೀಲ್ ಮತ್ತು ರಫೀಕ್ ಇದ್ದರು.ಸೋಮವಾರಪೇಟೆ: ಕೊಡಗು ಹಳೆ ವಿದ್ಯಾರ್ಥಿಗಳ ಸಂಘ ದುಬೈ, ಸಂಯುಕ್ತ ಅರಬ್ ಸಂಸ್ಥಾನ ಮತ್ತು ಯುಎಇ ಹೆಮ್ಮೆಯ ಕನ್ನಡಿಗರ ಸಂಘದ ವತಿಯಿಂದ ಮಸೀದಿ, ಚರ್ಚ್ನ ಧರ್ಮಗುರುಗಳು ಹಾಗೂ ದೇವಾಲಯಗಳ ಅರ್ಚಕರಿಗೆ ಆಹಾರ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು.

ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹಮ್ಮದ್ ಶಾಫಿ ಕೊಟ್ಟಮುಡಿ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಯುಎಇ ಹೆಮ್ಮೆಯ ಕನ್ನಡಿಗರ ಸಂಘದ ಸ್ಥಾಪಕ ಸದಸ್ಯೆ ಡಾ. ಲೇಖಾ ಅಪ್ಪಯ್ಯ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎ. ಯಾಕುಬ್, ಜಯ ವೀರಮಾತೆ ದೇವಾಲಯದ ಧರ್ಮಗುರು ರಾಯಪ್ಪ, ಬಜೆಗುಂಡಿ ಅಯ್ಯಪ್ಪ ದೇವಾಲಯದ ಆರ್ಚಕ ಜಗದೀಶ್ ಉಡುಪ, ಸೋಮವಾರಪೇಟೆ ಮಸೀದಿಯ ಖತೀಬ ಅಜೀಜ್ ಸಖಾಫಿ, ಬಜೆಗುಂಡಿ ಮಸೀದಿ ಖತೀಬ ಹಂಝ ಮಿಸ್ಬಾಹಿ, ಹನಫಿ ಮಸೀದಿ ಧರ್ಮಗುರು ಮೊಹಮ್ಮದ್ ಅಝಮ್ ಮತ್ತಿತರರು ಇದ್ದರು.ಸೋಮವಾರಪೇಟೆ: ಜನತೆಯ ಆಶೀರ್ವಾದದಿಂದ ಚುನಾವಣೆಯಲ್ಲಿ ಗೆದ್ದು ಬರುವ ಜನಪ್ರತಿನಿಧಿಗಳು ಅದೇ ಜನತೆ ಸಂಕಷ್ಟದಲ್ಲಿದ್ದಾಗ ಸ್ಪಂದಿಸುವುದು ತಮ್ಮ ಕರ್ತವ್ಯ ಎಂದು ಭಾವಿಸಿ ಸ್ಪಂದನ ನೀಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಸೋಮವಾರಪೇಟೆ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ೪೬ ಮಂದಿ ಸದಸ್ಯರಿಗೆ ಇಲ್ಲಿನ ಪತ್ರಿಕಾಭವನದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಕಷ್ಟದ ಸಂದರ್ಭದಲ್ಲಿ ನೆರವಾಗುವವನೇ ನಿಜವಾದ ಸ್ನೇಹಿತ. ಕೊರೊನಾದಂತಹ ಸಂಕಷ್ಟದ ಸನ್ನಿವೇಶದಲ್ಲಿ ತೊಂದರೆಯಲ್ಲಿರುವ ಮಂದಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದರು.

ಈ ನಿಟ್ಟಿನಲ್ಲಿ ತಾನು ಕ್ಷೇತ್ರದ ೪೮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸೀಲ್‌ಡೌನ್ ಕುಟುಂಬಗಳಿಗೆ, ವಿವಿಧ ಸಂಘ ಸಂಸ್ಥೆಗಳ ಸದಸ್ಯರಿಗೆ ಕಿಟ್ ವಿತರಿಸುತ್ತಿದ್ದೇನೆ. ಇಂತಹ ಸಂಕಷ್ಟದ ಸನ್ನಿವೇಶದಲ್ಲಿ ಎಲ್ಲರೂ ತಮ್ಮ ಕೈಲಾದ ಸಹಾಯ ಚಾಚಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಉಪಸ್ಥಿತರಿದ್ದರು.

ಈ ಸಂದರ್ಭ ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ಉಪಾಧ್ಯಕ್ಷ ಜನಾರ್ಧನ್, ಕಾರ್ಯದರ್ಶಿ ದೀಪಕ್, ನಿರ್ದೇಶಕ ವಸಂತ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಚಂದನ ಸುಬ್ರಮಣಿ, ಉಪಾಧ್ಯಕ್ಷ ಧರ್ಮಪ್ಪ, ಮಡಿಕೇರಿ ತಾಲೂಕು ಅಧ್ಯಕ್ಷ ಪ್ರದೀಪ್, ವೀರಾಜಪೇಟೆ ತಾಲೂಕು ಅಧ್ಯಕ್ಷ ರವೀಂದ್ರ ಅವರುಗಳು ಉಪಸ್ಥಿತರಿದ್ದು, ಜಿಲ್ಲಾ ಮಟ್ಟದಲ್ಲಿ ಛಾಯಾ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಒದಗಿಸುವಂತೆ ಮನವಿ ಮಾಡಿದರು.ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಘಟಕದಲ್ಲಿರುವ ಸಕ್ಡೆನ್ ಕಾಫಿ ಇಂಡಿನ್ ಪ್ರೆöÊವೇಟ್ ಲಿಮಿಟೆಡ್ ವತಿಯಿಂದ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ೧೫೦ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ವಹಿಸಿದ್ದರು. ಪಂಚಾಯಿತಿ ವ್ಯಾಪ್ತಿಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಗ್ರಾಮ ಪಂಚಾಯಿತಿ ನೀರು ಗಂಟಿಗಳಿಗೆ, ಕೊರೊನಾ ಸೋಂಕಿತ ವ್ಯಕ್ತಿಯ ಕುಟುಂಬದವರಿಗೆ ಮತ್ತು ಬಡ ಕುಟುಂಬದವರಿಗೆ ಕಿಟ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಹರೀಶ್, ಪ್ರಮುಖರಾದ ಅಕ್ಷಯ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರುಗಳಾದ ಟಿ.ಪಿ. ಹಮೀದ್, ಅರುಣ್ ರಾವ್, ಶಿವಕುಮಾರ್ ಸೇರಿದಂತೆ ಸದಸ್ಯರು ಹಾಜರಿದ್ದರು.ಕುಶಾಲನಗರ: ಕುಶಾಲನಗರ ತಾಲೂಕು ವ್ಯಾಪ್ತಿಯ ಛಾಯಾಗ್ರಾಹಕರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಆಹಾರ ವಸ್ತುಗಳ ಕಿಟ್ ವಿತರಣೆ ಮಾಡಿದರು. ಕುಶಾಲನಗರ ವಾಸವಿಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ೫೦ಕ್ಕೂ ಅಧಿಕ ಮಂದಿಗೆ ಅಗತ್ಯ ವಸ್ತುಗಳ ಕಿಟ್ ನೀಡಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಡಿವೈಎಸ್‌ಪಿ ಶೈಲೇಂದ್ರ ಕುಮಾರ್, ಜಿ.ಪಂ. ಮಾಜಿ ಸದಸ್ಯೆ ಲೋಕೇಶ್ವರಿ ಗೋಪಾಲ್, ಮಂಜುಳಾ, ಛಾಯಾಗ್ರಾಹಕ ಸಂಘದ ಅಧ್ಯಕ್ಷ ಶಾಂತಪ್ಪ, ಕೆ.ಎಸ್. ನಾಗೇಶ್ ಮತ್ತಿತರರು ಇದ್ದರು.ಪೊನ್ನಂಪೇಟೆ: ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅಜ್ಜಿಕುಟ್ಟೀರ ಎಸ್. ನರೇನ್ ಕಾರ್ಯಪ್ಪ ಅವರು ಕೋವಿಡ್ ಕಾಲದ ಸಂಕಷ್ಟ ಎದುರಿಸುತ್ತಿರುವ ವಿಶೇಷಚೇತನರಿಗೆ ಮತ್ತು ಅವರ ಕುಟುಂಬದವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಪ್ರಾಯೋಜಿಸಿರುವ ಆಹಾರ ಕಿಟ್‌ಗಳನ್ನು ಪೊನ್ನಂಪೇಟೆ ತಾಲೂಕಿನ ಬಾಳೆಲೆ ಮತ್ತು ಮಾಯಮುಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿತರಿಸಿದರು.

೪ ಜನರಿಗೆ ಒಂದು ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ಗಳನ್ನು ವಿಶೇಷಚೇತನರಿಗೆ ಕಾಂಗ್ರೆಸ್ ಪ್ರಮುಖರ ತಂಡ ಅವರ ಮನೆಗಳಿಗೆ ಭೇಟಿ ನೀಡಿ ಹಸ್ತಾಂತರಿಸಿತು.

ಸAತ್ರಸ್ತರಿಗೆ ಕಿಟ್‌ಗಳನ್ನು ವಿತರಿಸಿದ ಸಂದರ್ಭ ಜಿಲ್ಲಾ ಕಾಂಗ್ರೆಸ್ ವಕ್ತಾರ ಆಪಟ್ಟೀರ ಟಾಟು ಮೊಣ್ಣಪ್ಪ, ಜಿ.ಪಂ. ಮಾಜಿ ಸದಸ್ಯ ಬಾನಂಡ ಪ್ರಥ್ಯು, ಬಾಳೆಲೆಯ ಕಾಂಗ್ರೆಸ್ ಮುಖಂಡ ಆದೇಂಗಡ ವಿನು ಉತ್ತಪ್ಪ ಮೊದಲಾದವರು ಹಾಜರಿದ್ದರು.