ಗೋಣಿಕೊಪ್ಪಲು, ಜೂ. ೩೦: ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ವತಿಯಿಂದ ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ಭೇಟಿ ಮಾಡಿದ ರೈತ ಮುಖಂಡರು ಕೋವಿಡ್ ನಿಯಮದಿಂದ ಕೃಷಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳಲು ಡಿಸಿ ಯವರಲ್ಲಿ ಮನವಿ ಮಾಡಿದರು. ಕೃಷಿಕರು, ರೈತರು ತಮ್ಮ ಕೃಷಿ ಚಟುವಟಿಕೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಸರ್ಕಾರ ನಿಗದಿಪಡಿಸಿದ ದಿನಗಳಂದು ನಗರದ ಪ್ರದೇಶಕ್ಕೆ ತಮ್ಮ ವಾಹನದಲ್ಲಿ ದಕ್ಷಿಣ ಕೊಡಗಿನ ಕುಟ್ಟ, ಶ್ರೀಮಂಗಲ, ಹುದಿಕೇರಿ ಹಾಗೂ ಪೊನ್ನಂಪೇಟೆಯಿAದ ಗೋಣಿಕೊಪ್ಪಕ್ಕೆ ಆಗಮಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರು ಟ್ರಾಫಿಕ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಅಲ್ಲಲ್ಲಿ ರಸ್ತೆಗೆ ಬ್ಯಾರಿಕ್ಯಾಡ್ ಇಟ್ಟು ರೈತರ ವಾಹನಗಳಿಗೆ ತಡೆಯುಂಟು ಮಾಡುತ್ತಿದ್ದಾರೆ. ಇದರಿಂದಾಗಿ ರೈತರಿಗೆ ತಮಗಿಷ್ಟ ಬಂದ ಜಾಗದಲ್ಲಿ ಸಾಮಗ್ರಿಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ.

ಇಂತಹ ನಿಯಮಗಳು ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ನಡೆಯುತ್ತಿಲ್ಲ. ಕೇವಲ ದಕ್ಷಿಣ ಕೊಡಗಿನಲ್ಲಿ ಮಾತ್ರ ಈ ರೀತಿಯಲ್ಲಿ ಪೊಲೀಸರು ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಡಿಸಿ ಯವರು ಸಮಸ್ಯೆ ಬಗೆಹರಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ಎ.ಸಿ. ಕಚೇರಿಯಲ್ಲಿ ರೈತರ ಭೂ ಕಡತಗಳು ಅನಗತ್ಯವಾಗಿ ವಿಳಂಬ ಮಾಡುವ ಮೂಲಕ ರೈತರ ತೊಂದರೆ ನೀಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಮನು ಸೋಮಯ್ಯ ಜಿಲ್ಲಾಧಿಕಾರಿಗಳ ಗಮನ ಸೆಳೆದರು.

ಇವರ ಪಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ಕೋವಿಡ್ ಸಮಯದಲ್ಲಿ ಹೆಚ್ಚಿನ ಸಿಬ್ಬಂದಿಗಳು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಕಡತ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು. ರೈತರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೀಡುವಂತೆ ಗಮನ ಸೆಳೆಯಲಾಯಿತು. ಈ ಬಗ್ಗೆ ರೈತ ಮುಖಂಡರು ಗ್ರಾಮ ಮಟ್ಟದಲ್ಲಿ ರೈತರನ್ನು ಒಂದೆಡೆ ಸೇರಿಸಿದರೆ ಲಸಿಕೆ ಕೊಡಿಸುವ ಕಾರ್ಯವನ್ನು ಆರೋಗ್ಯ ಇಲಾಖೆಯ ವತಿಯಿಂದ ಮಾಡಲಾಗುತ್ತದೆ ಎಂದರು. ಕೇರಳದಿಂದ ಜಿಲ್ಲೆಗೆ ಆಗಮಿಸುವವರ ಮೇಲೆ ವಿಶೇಷ ಗಮನ ಹರಿಸುವಂತೆ ರೈತ ಮುಖಂಡರು ಪ್ರಸ್ತಾಪ ಮಾಡಿದರು.

ಭೇಟಿಯ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಹೋಬಳಿ ಅಧ್ಯಕ್ಷರಾದ ಆಲೆಮಾಡ ಮಂಜುನಾಥ್, ಮಂಡೆಪAಡ ಪ್ರವೀಣ್, ಚಂಗುಲAಡ ಸೂರಜ್, ಮೇಚಂಡ ಕಿಶ ಮಾಚಯ್ಯ, ತಾಣಚ್ಚಿರ ಲೇಹರ್ ಬಿದ್ದಪ್ಪ, ಅಪ್ಪಚ್ಚಂಗಡ ಮೋಟಯ್ಯ, ಮುಖಂಡರಾದ ಚಪ್ಪುಡೀರ ಕುಟ್ಟಪ್ಪ, ಚೊಟ್ಟೆಕಾಳಪಂಡ ಮನು, ಪುಚ್ಚಿಮಾಡ ರಾಯ್ ಮಾದಪ್ಪ, ಉದಯ, ಚಂದ್ರು ಮುಂತಾದವರು ಉಪಸ್ಥಿತರಿದ್ದರು. - ಹೆಚ್.ಕೆ. ಜಗದೀಶ್