ಕೂಡಿಗೆ, ಜು.೧: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ.ನಾರಾಯಣಗೌಡ ಅವರು ಕೂಡಿಗೆ ಕ್ರೀಡಾ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಕ್ರೀಡಾ ಶಾಲೆಯ ತರಗತಿಗಳ ಕೊಠಡಿ, ಕೃತಕ ಹುಲ್ಲಿನ ಹಾಕಿ ಕ್ರೀಡಾಂಗಣ ಮತ್ತು ೪೦೦ ಮೀಟರ್ ಓಟದ ಅಥ್ಲೆಟಿಕ್ಸ್ ಕ್ರೀಡಾಂಗಣ ಹಾಗೂ ಕ್ರೀಡಾಶಾಲೆಯ ಒಳ ಕ್ರೀಡಾಂಗಣವನ್ನು ಖುದ್ದಾಗಿ ಭೇಟಿ ನೀಡಿ ಸವಿಸ್ತಾರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಸಚಿವರು ಸುದ್ದಿಗಾರ ರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಥಮವಾಗಿ ಪ್ರಾರಂಭಗೊAಡಿರುವ ಕೊಡಗಿನ ಕೂಡಿಗೆಯ ಕ್ರೀಡಾ ಶಾಲೆಯ ಅಭಿವೃದ್ಧಿ ಈಗಾಗಲೇ ಒಂದೂವರೆ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಕ್ರಿಯಾ ಯೋಜನೆ ಅನುಗುಣವಾಗಿ ಕ್ರೀಡಾ ಶಾಲೆಯ ಕೂಡಿಗೆ, ಜು.೧: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ.ನಾರಾಯಣಗೌಡ ಅವರು ಕೂಡಿಗೆ ಕ್ರೀಡಾ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಕ್ರೀಡಾ ಶಾಲೆಯ ತರಗತಿಗಳ ಕೊಠಡಿ, ಕೃತಕ ಹುಲ್ಲಿನ ಹಾಕಿ ಕ್ರೀಡಾಂಗಣ ಮತ್ತು ೪೦೦ ಮೀಟರ್ ಓಟದ ಅಥ್ಲೆಟಿಕ್ಸ್ ಕ್ರೀಡಾಂಗಣ ಹಾಗೂ ಕ್ರೀಡಾಶಾಲೆಯ ಒಳ ಕ್ರೀಡಾಂಗಣವನ್ನು ಖುದ್ದಾಗಿ ಭೇಟಿ ನೀಡಿ ಸವಿಸ್ತಾರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಂತರ ಸಚಿವರು ಸುದ್ದಿಗಾರ ರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಥಮವಾಗಿ ಪ್ರಾರಂಭಗೊAಡಿರುವ ಕೊಡಗಿನ ಕೂಡಿಗೆಯ ಕ್ರೀಡಾ ಶಾಲೆಯ ಅಭಿವೃದ್ಧಿ ಈಗಾಗಲೇ ಒಂದೂವರೆ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಕ್ರಿಯಾ ಯೋಜನೆ ಅನುಗುಣವಾಗಿ ಕ್ರೀಡಾ ಶಾಲೆಯ ವರ್ಷದಿಂದ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು. ಇದರ ಜೊತೆಯಲ್ಲಿ ಈಗಾಗಲೇ ಹಾಕಿ ಕ್ರೀಡಾಪಟುಗಳಿಗೆ ನಿರ್ಮಾಣ ವಾಗಿರುವ ನೂತನ ಹಾಕಿ ಟರ್ಫ್ ಅನ್ನು ಬಳಕೆ ಮಾಡಿಕೊಳ್ಳಲಾಗುವುದು. ಈಗಾಗಲೇ ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬAಧಿಸಿದAತೆ ರಾಜ್ಯ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ ಅದರನ್ವಯವಾಗಿ ಯೋಜನೆಯನ್ನು ರೂಪಿಸಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಈ ಸಂದರ್ಭ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಗೋಪಾಲಕೃಷ್ಣ, ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಕೂಡಿಗೆ ಕ್ರೀಡಾ ಶಾಲೆಯ ಮುಖ್ಯ ಶಿಕ್ಷಕ ದೇವಕುಮಾರ್, ತರಬೇತುದಾರರಾದ ಅಂತೋಣಿ ಡಿಸೋಜ, ವೆಂಕಟೇಶ್, ಶಿಕ್ಷಕರಾದ ಪ್ರಮಾತ್ನಾಥನ್, ಮುರುಳಿ ಅರ್ಮಿತ್, ರಂಜನಿ ಮೋಹನ್, ಹರ್ಷ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
- ಕೆ.ಕೆ. ನಾಗರಾಜಶೆಟ್ಟಿ