ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಮುಖ್ಯಮಂತ್ರಿ ಸಲಹೆ
ಬೆಂಗಳೂರು, ಜು. ೧: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊAಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿAದಾಗಿ ಪತ್ರಿಕೋದ್ಯಮದ ಸ್ವರೂಪವೇ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ನುಡಿದರು. ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕೋವಿಡ್ ೨ನೇ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‌ನಿಂದ ಮೃತಪಟ್ಟ ೩೧ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ೫ ಲಕ್ಷ ರೂ.ಗಳ ನೆರವು ನೀಡಲಾಗಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು ೨೫ ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ ೫ ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡರು. ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್. ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್. ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸದಿದ್ದರೆ ಕ್ರಮ
ಬೆಂಗಳೂರು, ಜು. ೧: ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸದಿರುವ ಕೈಗಾರಿಕೆಗಳು, ಆಸ್ಪತ್ರೆಗಳು, ಕಲ್ಲು ಕ್ರಶರ್‌ಗಳು, ಔಷಧಿ ತಯಾರಿಕಾ ಕಂಪೆನಿಗಳ ತಪಾಸಣೆ ಅಭಿಯಾನ ಆರಂಭಿಸುವುದಾಗಿ ಪರಿಸರ ಜೀವಿಶಾಸ್ತç ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯಲ್ಲಿರುವ ವಿವಿಧ ರೀತಿಯ ಕೈಗಾರಿಕೆಗಳು ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡದೇ ನದಿ-ಕೆರೆ ಸೇರಿದಂತೆ ಜಲ ಮೂಲಗಳಿಗೆ ನೇರವಾಗಿ ಹಾಕುತ್ತಿರುವುದು ಹಾಗೂ ಖಾಲಿ ಜಮೀನುಗಳಿಗೆ ತುಂಬುತ್ತಿ ರುವುದರ ಬಗ್ಗೆ ಅನೇಕ ದೂರುಗಳು ಬಂದಿವೆ. ಈ ಹಿನ್ನೆಲೆ ತಾವೇ ಖುದ್ದಾಗಿ ಮುಂದಿನ ವಾರದಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡುವುದಾಗಿ ಸಚಿವ ಯೋಗೇಶ್ವರ ಹೇಳಿದ್ದಾರೆ. ಯಾವುದೇ ರೀತಿಯ ಕೈಗಾರಿಕೆಗಳು ಪರಿಸರ ನಿಯಮಗಳನ್ನು ಉಲ್ಲಂಘಿಸಿದ್ದರೆ ಮುಲಾಜಿಲ್ಲದೇ ಕ್ರಮಕೈಗೊಂಡು ದಂಡ ವಿಧಿಸಲಾಗುವುದು. ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯದಾದ್ಯಂತ ಪ್ರವಾಸ ಮಾಡಿ ವಿವಿಧ ರೀತಿಯ ಕೈಗಾರಿಕೆಗಳನ್ನು ತಾವೇ ಖುದ್ದಾಗಿ ಪರಿಶೀಲಿಸುವುದಾಗಿ ಹೇಳಿದರು. ಗಣಿ ಮತ್ತು ಭೂ-ವಿಜ್ಞಾನ ಇಲಾಖೆಯಲ್ಲಿ ಮರಳು, ಕಲ್ಲು, ಗ್ರೆನೈಟ್‌ಗಳನ್ನು ಸಾಗಿಸಲು ಅನುಮತಿ ಪತ್ರ ನೀಡುತ್ತಿದ್ದು, ಅದೇ ರೀತಿಯಲ್ಲಿ ಪರಿಸರ ಇಲಾಖೆಯಲ್ಲು ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿಖರವಾದ ತೂಕ ಮಾಡಿ ಅನುಮತಿ ಪತ್ರ ನೀಡುವ ವ್ಯವಸ್ಥೆ ಜಾರಿಗೆ ತರುವುದಾಗಿ ಸಚಿವರು ತಿಳಿಸಿದರು.
ಸೋಂಕು ಮರುಕಳಿಸಿದ ಮಂದಿಯಲ್ಲಿ ಕೋವಿಡ್-೧೯ ಲಸಿಕೆಯಿಂದ ರೋಗಲಕ್ಷಣ, ವೈರಲ್ ಲೋಡ್, ತೀವ್ರತೆ ಕಡಿಮೆ!
ವಾಷಿಂಗ್‌ಟನ್, ಜು. ೧: ಕೋವಿಡ್-೧೯ ಲಸಿಕೆ ತೆಗೆದುಕೊಂಡವರಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಲ್ಲಿ ಅಂತಹ ವ್ಯಕ್ತಿಗಳಲ್ಲಿ ರೋಗಲಕ್ಷಣ, ವೈರಲ್ ಲೋಡ್, ತೀವ್ರತೆ ಕಡಿಮೆಯಾಗಲಿದೆ ಎಂದು ಎಂಆರ್‌ಎನ್‌ಎ ಪ್ರಿವೆಂಟೀವ್ಸ್ ಎಂಬ ಅಧ್ಯಯನ ವರದಿಯಿಂದ ತಿಳಿದುಬಂದಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಲಿಕೆ ಮಾಡಿದರೆ ಲಸಿಕೆ ಹಾಕಿಸಿಕೊಂಡವರಿಗೆ ಸೋಂಕು ತಗುಲಿದಾಗ ಅವರಲ್ಲಿ ವೈರಾಣು ಪ್ರಮಾಣ ಕುಗ್ಗುತ್ತದೆ. ಸೋಂಕು ಬಾಧಿಸುವ ಅವಧಿ ಕಡಿಮೆ ಆಗಲಿದೆ ಹಾಗೂ ರೋಗ ಲಕ್ಷಣಗಳು ಸೌಮ್ಯವಾಗಿರಲಿವೆ ಎಂದು ಅಮೇರಿಕಾದ ಎಂಆರ್‌ಎನ್‌ಎ ಪ್ರಿವೆಂಟೀವ್ಸ್ ಹೇಳಿದೆ. ಸÀಂಶೋಧಕರ ಪ್ರಕಾರ ಕೋವಿಡ್-೧೯ ಲಸಿಕೆಗಳು ಸೋಂಕು ತಡೆಗಟ್ಟುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಆದರೆ ಯಾವುದೇ ಲಸಿಕೆಗಳು ಶೇ. ೧೦೦ ರಷ್ಟು ಪರಿಣಾಮಕಾರಿಯಾಗಲು ಸಾಧ್ಯವಿರಲ್ಲ. ಲಸಿಕೆ ತೆಗೆದುಕೊಂಡ ಬಳಿಕವೂ ಸೋಂಕು ಬರುತ್ತವೆ ಎಂದು ಹೇಳಿದ್ದಾರೆ. ಲಸಿಕೆ ತೆಗೆದುಕೊಂಡಲ್ಲಿ ಸೋಂಕು ತಗುಲುವ ಸಾಧ್ಯತೆ ಶೇ. ೯೦ ರಷ್ಟು ಇರುವುದಿಲ್ಲ. ಒಂದು ವೇಳೆ ಬಂದಲ್ಲೂ ವೈರಾಣು ಕಡಿಮೆ ಪ್ರಮಾಣದಲ್ಲಿರುತ್ತವೆ ಹಾಗೂ ರೋಗ ಲಕ್ಷಣಗಳು ಸೌಮ್ಯವಾಗಿರಲಿವೆ ಎಂದು ಯೂನಿವರ್ಸಿಟಿ ಆಫ್ ಅರಿಝೋನಾ ಆರೋಗ್ಯ ವಿಜ್ಞಾನ ವಿಭಾಗದ ಪ್ರೊಫೆಸರ್ ಜೆಫ್ ಬರ್ಗೆಸ್ ತಿಳಿಸಿದ್ದಾರೆ. ಡಿ. ೧೪, ೨೦೨೦ ರಿಂದ ಏಪ್ರಿಲ್ ೧೪, ೨೦೨೧ ವರೆಗೂ ಈ ಅಧ್ಯಯನದ ಭಾಗವಾಗಿದ್ದವರು ಪ್ರತಿ ವಾರವೂ SಂಖS-ಅoಗಿ-೨ ಟೆಸ್ಟಿಂಗ್‌ಗೆ ಒಳಪಟ್ಟಿದ್ದರು. ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡವರ ಪೈಕಿ ೫ ಮಂದಿಗೆ ಹಾಗೂ ಭಾಗಶಃ ಲಸಿಕೆ ಹಾಕಿಸಿಕೊಂಡ ೧೧ ಮಂದಿಗೆ ಹಾಗೂ ೧೫೬ ಮಂದಿ ಲಸಿಕೆ ಹಾಕಿಸಿಕೊಳ್ಳದೇ ಇದ್ದವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಲಿಕೆ ಮಾಡಿದರೆ ಫೈಜರ್ ಹಾಗೂ ಮಾಡೆರ್ನ ಮೆಸೆಂಜರ್ ಆರ್‌ಎನ್‌ಎ ಲಸಿಕೆಗಳನ್ನು ಸೋಂಕು ಅವಧಿಯಲ್ಲಿ ಪಡೆದವರಲ್ಲಿ ವೈರಲ್ ಲೋಡ್ ಶೇ. ೪೦ ರಷ್ಟು ಕಡಿಮೆ ಇತ್ತು. ರೋಗನಿರೋಧಕ ವ್ಯವಸ್ಥೆಯನ್ನು ಕೊರೊನಾ ವಿರುದ್ಧ ಹೋರಾಡಲು ಅಣಿಗೊಳಿಸುವುದಕ್ಕೆ ಎಂಆರ್‌ಎನ್‌ಎ ಲಸಿಕೆಗಳು ಪಾಥೋಜನ್‌ಗಳ ಬದಲು ಮೆಸೆಂಜರ್ ಆರ್‌ಎನ್‌ಎ (ಅಥವಾ mಖಓಂ) ಎಂಬ ಅಣುವನ್ನು ಬಳಕೆ ಮಾಡಿಕೊಳ್ಳುತ್ತವೆ. ಎರಡು ಡೋಸ್‌ಗಳ ಎಂಆರ್ ಎನ್‌ಎ ಕೋವಿಡ್-೧೯ ಲಸಿಕೆಗಳು ಶೇ. ೯೧ ರಷ್ಟು SಂಖS-ಅoಗಿ-೨ ವಿರುದ್ಧ ಪರಿಣಾಮ ಕಾರಿಯಾಗಿ ಕೆಲಸ ನಿರ್ವಹಿಸುತ್ತವೆ. ಒಂದೇ ಡೋಸ್ ಲಸಿಕೆ ಶೇ. ೮೧ ರಷ್ಟು ಪರಿಣಾಮಕಾರಿಯಾಗಿರುತ್ತವೆ ಎಂದು ಸಂಶೋಧಕರು ಹೇಳಿದ್ದಾರೆ.
ಆಗಸ್ಟ್ ೨೨ ರಂದು ಶಿಕ್ಷಕರ ಅರ್ಹತಾ ಪರೀಕ್ಷೆ
ಬೆಂಗಳೂರು, ಜು. ೧: ಒಂದರಿAದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್‌ಟಿಇಟಿ-೨೦೨೧) ಆಗಸ್ಟ್ ೨೨ ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಒಂದರಿAದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ, ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ/ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿAದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ ೨೦ ಕೊನೆಯ ದಿನವಾಗಿದೆ. ಆ. ೨೨ ರಂದು ಬೆಳಿಗ್ಗೆ ೯.೩೦ ರಿಂದ ೧೨ ಗಂಟೆ ಮತ್ತು ಮಧ್ಯಾಹ್ನ ೨ ಗಂಟೆಯಿAದ ೪.೩೦ ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ ೧೫೦ ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ. ೧೨ ರಿಂದ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.