ಸೋಮವಾರಪೇಟೆ,ಜೂ.೧: ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆದೇಶದ ಹಿನ್ನೆಲೆ ಇಲ್ಲಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾ. ೩ರಂದು ಕೋವಿಡ್ ಲಸಿಕಾ ಅಭಿಯಾನ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ತಾ. ೩ರಂದು ಕಾಲೇಜು ಆವರಣದಲ್ಲಿ ನಡೆಯುವ ಅಭಿಯಾನದಲ್ಲಿ ಕಾಲೇಜು ಪ್ರಾಧ್ಯಾಪಕ ವರ್ಗ, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುವುದು. ಲಸಿಕೆ ಪಡೆಯಲು ಆಗಮಿಸುವವರು ಕಡ್ಡಾಯವಾಗಿ ಗುರುತಿನ ಪತ್ರ ಹಾಗೂ ಆಧಾರ್ ಕಾರ್ಡ್ ತರಬೇಕೆಂದು ಮಾಹಿತಿ ನೀಡಿದ್ದಾರೆ.

ದೂರದ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಚೆಕ್‌ಪೋಸ್ಟ್ನಲ್ಲಿ ತಮ್ಮ ಗುರುತಿನ ಚೀಟಿ ತೋರಿಸಿ ಅಭಿಯಾನದಲ್ಲಿ ಭಾಗವಹಿಸಬಹುದು ಎಂದು ಪ್ರಾಂಶುಪಾಲ ರಾಜು ಅವರು ತಿಳಿಸಿದ್ದಾರೆ.