ಮಡಿಕೇರಿ, ಜು. ೧: ಮಡಿಕೇರಿ-ಗಾಳಿಬೀಡು ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ದುರಸ್ತಿಕಾರ್ಯ ಕೈಗೊಳ್ಳಬೇಕೆಂದು ಗಾಳಿಬೀಡು ಸ್ನೇಹಿತರ ಯುವಕ ಸಂಘದ ಪ್ರಮುಖರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

೨೦೧೮ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸುಮಾರು ೧ ಕಿ.ಮೀ. ನಷ್ಟು ದೂರದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಹಾಗೂ ಪಾದಚಾರಿಗಳ ಸಂಚಾರ ಅಸಾಧ್ಯವಾಗಿದೆ. ಗಾಳಿಬೀಡು, ಕಾಲೂರು ಹಾಗೂ ಮೊಣ್ಣಂಗೇರಿ ಗ್ರಾಮಸ್ಥರು ಇದೇ ರಸ್ತೆಯನ್ನು ಅವಲಂಭಿಸಿದ್ದಾರೆ. ಪರ್ಯಾಯವಾಗಿ ಯಾವುದೇ ಬದಲಿ ಸಂಪರ್ಕ ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ಸ್ಥಳೀಯರ ಮನವಿ ಮೇರೆಗೆ ಮಳೆಹಾನಿ ಪರಿಹಾರ ನಿಧಿಯಿಂದ ೨೦೨೦-೨೧ನೇ ಸಾಲಿನಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲಾಯಿತು. ಆದರೆ ಕಾಮಗಾರಿ ಅಪೂರ್ಣಗೊಂಡಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.

ಇದೀಗ ಮಳೆಗಾಲವೂ ಆರಂಭಗೊAಡಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿ ರಸ್ತೆ ಅವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಬೇಕು. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಯುವಕ ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.