ವೀರಾಜಪೇಟೆ, ಜು. ೧: ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡದ ಹಿನೆÀ್ನಲೆಯಲ್ಲಿ ಇಡೀ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್‌ನಲ್ಲಿ ಮುಂದಿದ್ದೇವೆ. ಸರ್ಕಾರದ ಕಟ್ಟುನಿಟ್ಟಿನ ಕಾನೂನನ್ನು ಪಾಲಿಸದಿದ್ದರೆ ಸೋಂಕನ್ನು ತಡೆಗಟ್ಟಲು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬರು ಸಹಕರಿಸಬೇಕು ಎಂದು ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಹೇಳಿದರು.

ಸುಂಕದಕಟ್ಟೆ ಸಮುದಾಯ ಭವನದಲ್ಲಿ ಮಲೆತಿರಿಕೆ ಹಾಗೂ ಅಯ್ಯಪ್ಪಬೆಟ್ಟ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ ನಾವು ಇನ್ನೂ ಜಾಗೃತರಾಗದ ಕಾರಣ ನಮ್ಮಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ನಮ್ಮಲ್ಲಿ ಮಾತ್ರ ಅಲ್ಲ. ರಾಜ್ಯದಾದ್ಯಂತ ಲಸಿಕೆ ಪ್ರಮಾಣ ಕಡಿಮೆ ಇದೆ. ಒಂದೆರಡು ದಿನದಲ್ಲಿ ಕೇಂದ್ರದಿAದ ಸಾಕಷ್ಟು ಪ್ರಮಾಣದ ಲಸಿಕೆ ಬರುತ್ತಿದ್ದು ಪ್ರತಿಯೊಬ್ಬರಿಗೂ ಲಸಿಕೆ ದೊರೆಯುತ್ತದೆ. ಬೆಟ್ಟ ಪ್ರದೇಶಗಳಲ್ಲಿ ಗುಂಪು ಮನೆಗಳಿರುವುದರಿಂದ ಸೋಂಕು ಹರಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಿ. ಪರಸ್ಪರ ಅಂತರ ಹಾಗೂ ಮಾಸ್ಕ್ ಧರಿಸುವಿಕೆಯಿಂದ ಸೋಂಕಿನ ಹರಡುವಿಕೆ ನಿಯಂತ್ರಿಸಬಹುದು ಎಂದು ಹೇಳಿದರು.

ಗಡಿಭಾಗದ ಚೆಕ್‌ಪೋಸ್ಟ್ಗಳಲ್ಲಿ ಅಧಿಕಾರಿಗಳ ನಿರ್ಲಕ್ಷö್ಯವನ್ನು ಸದುಪಯೋಗ ಪಡಿಸಿಕೊಂಡ ಕೆಲವು ತೋಟದ ಮಾಲೀಕರು ತಮ್ಮ ತೋಟದಲ್ಲಿ ಕೆಲಸ ನಿರ್ವಹಿಸಲು ಅಸ್ಸಾಂ ಹಾಗೂ ಇತರೆಡೆಗಳಿಂದ ಕಾರ್ಮಿಕರನ್ನು ಕರೆ ತರುತ್ತಿದ್ದಾರೆ. ಅವರಲ್ಲಿ ಯಾವುದೇ ನೆಗಟೀವ್ ವರದಿ ಇರುವುದಿಲ್ಲ. ಅಂತವರಿAದಲೇ ಸೋಂಕು ಹೆಚ್ಚಾಗಲು ಕಾರಣವಾಗಿದೆ. ಯಾರೇ ಆಗಲಿ ಒಂದೆರಡು ತೋಟ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದರೆ ಉಳಿದವರೆಲ್ಲರು ಎಚ್ಚರಗೊಳ್ಳುತ್ತಾರೆ ಎಂದು ಹೇಳಿದರು.