ಮಡಿಕೇರಿ, ಜು. ೧: ವೀರಾಜಪೇಟೆ ಕ್ರೀಡಾಂಗಣ ಮತ್ತು ಮಡಿಕೇರಿ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಉನ್ನತ್ತೀಕರಣಕ್ಕೆ ಒಟ್ಟು ರೂ. ೫೦ ಲಕ್ಷ ಹಾಗೂ ಕೂಡಿಗೆ ಕ್ರೀಡಾ ಶಾಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ. ೧.೫೦ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ, ಕೊಡಗು ಜಿಲ್ಲೆಯಲ್ಲಿ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮತ್ತು ಬೆಳೆ ವಿಮೆ ಪಾವತಿಯ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲೆಯ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹಾಗೂ ಕ್ರೀಡಾಂಗಣ ಅಭಿವೃದ್ಧಿಗಾಗಿ ರೂಪಿಸಿರುವ ಯೋಜನೆಗಳ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಕೋವಿಡ್-೧೯ ಪರಿಸ್ಥಿತಿಯಿಂದ ಕ್ರೀಡಾ ಚಟುವಟಿಕೆಗಳು ಸ್ಥಗಿತ ವಾಗಿದ್ದು, ಜಿಲ್ಲೆಯ ಕ್ರೀಡಾಪಟುಗಳು ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಜಿಲ್ಲೆಯಲ್ಲಿ ಕ್ರೀಡೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಜಿಲ್ಲೆಯ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯಕ್ಕೆ ಈಗಾಗಲೇ ಖೇಲೋ ಇಂಡಿಯಾ ಘೋಷಣೆ ಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ಹೇಳಿದರು.
ಕ್ರೀಡಾ ಇಲಾಖೆ ಆಯುಕ್ತರನ್ನು ಒಳಗೊಂಡ ಸಮಿತಿ ಸದ್ಯದಲ್ಲಿಯೇ ಜಿಲ್ಲೆಗೆ ಆಗಮಿಸಲಿದ್ದು, ಜನಪ್ರತಿನಿಧಿ ಗಳನ್ನು ಗಮನಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಶೀಲಿಸಿ ಕ್ರಮವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ವಿವಿಧ ಯುವಜನ ಕಾರ್ಯಕ್ರಮಗಳು ಈ ಬಾರಿ ನಡೆದಿರುವುದಿಲ್ಲ. ಅವುಗಳ ಅನುದಾನವನ್ನು ಬದಲಾವಣೆ ಮಾಡಿಕೊಂಡು ಕ್ರೀಡಾಂಗಣದ ಕೆಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ
ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರ ಅನುದಾನದಡಿ ನಡೆಯುತ್ತಿರುವ ಕಾಮಗಾರಿಗಳ ಪೈಕಿ ಅಪೂರ್ಣಗೊಂಡ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆÀ ಡಾ. ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕರ ಅನುದಾನದಡಿ ಮಂಜೂರಾದ ಕಾಮಗಾರಿಗಳ ಪೈಕಿ ೧೨೮ ಅಭಿವೃದ್ಧಿಗಳು ಬಾಕಿ ಇವೆ.
ರೂ. ೧೦ ಕೋಟಿ ಹಣ ಜಿಲ್ಲಾಡಳಿತದ ಖಾತೆಯಲ್ಲಿದೆ. ಆದರೂ, ಕಾಮಗಾರಿ ಯಾಕೆ ಪೂರ್ಣಗೊಂಡಿಲ್ಲ ಎಂದು ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು. ಹಣ ಸರಿಯಾಗಿ ವಿನಿಯೋಗಿಸದಿದ್ದಲ್ಲಿ ಹಣ ಹಿಂಪಡೆಯಬೇಕಾಗುತ್ತದೆ ಈ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಮುಗಿಸುವಂತೆ ನಿರ್ದೇಶನ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಮಾತನಾಡಿ, ಪೂರ್ಣಗೊಂಡ ಕಾಮಗಾರಿಯ ಅನುದಾನ ಇನ್ನೂ ಗುತ್ತಿಗೆದಾರರಿಗೆ ಬಿಡುಗಡೆಯಾಗಿಲ್ಲ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಯಾವುದೇ ಹಣ ಬಿಡುಗಡೆಗೆ ಬಾಕಿ ಇಲ್ಲ. ಅನುದಾನ ಬಿಡುಗಡೆಗೆ ಬಾಕಿ ಇದ್ದಲ್ಲಿ ಅದನ್ನು ತನ್ನ ಗಮನಕ್ಕೆ ತಂದರೆ ಶೀಘ್ರವೇ ಬಿಡುಗಡೆಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಅನುದಾನ ಬಿಡುಗಡೆಗೆ
(ಮೊದಲ ಪುಟದಿಂದ) ಜಿಲ್ಲಾಡಳಿತ ವಿಳಂಬ ಮಾಡುತ್ತಿಲ್ಲ ಎಂದು ತಿಳಿಸಿದರು.
ಅಧಿಕಾರಿ ವಿರುದ್ಧ ಅಸಮಾಧಾನ
ಪಂಚಾಯತ್ ರಾಜ್ ಕಾರ್ಯಪಾಲಕ ಅಭಿಯಂತರ ಶ್ರೀಕಂಠಯ್ಯ ವಿರುದ್ಧ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಸಮರ್ಪಕವಾಗಿ ಮಾಹಿತಿ ನೀಡದ ಹಿನ್ನೆಲೆ ಸಚಿವರು ಅಧಿಕಾರಿ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದರು. ಸಭೆಗೆ ಹಾಜರಾಗುವ ಮುನ್ನ ತಯಾರಾಗಿ ಬರಬೇಕು. ಯಾವುದೇ ಗೊಂದಲವಾಗಬಾರದು ಎಂದು ಸಚಿವರು ತಿಳಿಸಿದರು.
ಎಷ್ಟು ಕಾಮಗಾರಿ ಬಾಕಿ ಇದೆ. ಇದಕ್ಕೆ ಕಾರಣವೇನೂ.? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶ್ರೀಕಂಠಯ್ಯ ೧,೭೭೭ ಕಾಮಗಾರಿ ಪೈಕಿ ೧೬೫೯ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆಡಳಿತಾತ್ಮಕ ದೊರೆತ ಪೈಕಿ ೧೩೩೫ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ ೧೨೮ ಕಾಮಗಾರಿ ಅಪೂರ್ಣಗೊಂಡಿದೆ. ಉಳಿದ ಕಾಮಗಾರಿ ಆರಂಭಗೊಳ್ಳಬೇಕಾಗಿದೆ ಎಂದು ಮಾಹಿತಿ ನೀಡಿದರು.
ಏರಿಯಾ ಡೆವಲಪ್‌ಮೆಂಟ್ ಬೋರ್ಡ್ನ ಹಿರಿಯ ಅಧಿಕಾರಿ ಚಂದ್ರಶೇಖರಯ್ಯ ಮಾತನಾಡಿ, ಬಿಡುಗಡೆಯಾದ ರೂ ೧೧ ಕೋಟಿ ಪೈಕಿ ೫ ಕೋಟಿ ಹಣ ಖರ್ಚಾಗಿದೆ. ಬಾಕಿ ಇರುವ ಅನುದಾನ ವಿನಿಯೋಗಿಸಿದ ಬಳಿಕ ಮಾತ್ರ ಮುಂದಿನ ಹಂತದ ಅನುದಾನ ಬಿಡುಗಡೆ ಸಾಧ್ಯ ಎಂದರು.
ಅನುದಾನ ವಾಪಸ್ ಎಚ್ಚರಿಕೆ
ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ೨ ತಿಂಗಳಿನೊಳಗೆ ಅಭಿವೃದ್ಧಿ ಕಾರ್ಯಕ್ಕೆ ಬಳಸದಿದ್ದರೆ ಅನುದಾನವನ್ನು ಹಿಂಪಡೆಯ ಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡ ಅವರು ಎಚ್ಚರಿಸಿದರು.
ನಿವೇಶನ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಕಾಮಗಾರಿ ಆರಂಭಗೊಳ್ಳದಿದ್ದಲ್ಲಿ ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಸಿಕೊಳ್ಳಿ ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಚೆನ್ನಂಗೊಲ್ಲಿ ಪೈಸಾರಿಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅಧಿಕಾರಿಗಳು ನಿರ್ಲಕ್ಷö್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಜಿ.ಪಂ ಇಂಜಿನಿಯರ್, ಉದ್ದೇಶಿತ ಕಾಮಗಾರಿ ಪ್ರದೇಶದಲ್ಲಿ ದೇವರಕಾಡು ಇರುವ ಹಿನ್ನೆಲೆ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿದೆ. ಈ ನಿಟ್ಟಿನಲ್ಲಿ ಕಾಮಗಾರಿ ತಡವಾಗಿದೆ ಎಂದು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನ ಎಂ ಶೇಕ್ ರೈತರಿಗೆ ಬೆಳೆ ವಿಮೆ ಪಾವತಿಯಾಗಿರುವ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಇಲಾಖೆಯ ರಾಜ್ಯ ಆಯುಕ್ತ ಗೋಪಾಲಕೃಷ್ಣ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ಉಪವಿಭಾಗಧಿಕಾರಿ ಈಶ್ವರ್ ಕುಮಾರ್ ಖಂಡು ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.