ಮಡಿಕೇರಿ, ಜು. ೧: ಜಿಲ್ಲೆಯಲ್ಲಿ ಗುರುವಾರ ೧೧೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆೆ. ೮೨ ಆರ್‌ಟಿಪಿಸಿಆರ್ ಮತ್ತು ೨೯ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ೩೪, ಸೋಮವಾರಪೇಟೆ ತಾಲೂಕಿನಲ್ಲಿ ೩೬, ವೀರಾಜಪೇಟೆ ತಾಲೂಕಿನಲ್ಲಿ ೪೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೯,೫೬೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೯೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೮,೦೦೧ ಮಂದಿ ಗುಣಮುಖರಾಗಿದ್ದಾರೆ. ೧೧೮೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಯಾವುದೇ ಸಾವು ಉಂಟಾಗಿಲ್ಲ, ಒಟ್ಟು ೩೭೩ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೧೭೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೪.೫೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.