ಕೂಡಿಗೆ, ಜು. ೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ರೈತರ ಅಕ್ರಮ-ಸಕ್ರಮ ಯೋಜನೆಯ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿರುವ ಹಿನ್ನೆಲೆ ಕುಶಾಲನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಹೆಬ್ಬಾಲೆಯ ಅನೇಕ ರೈತರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮನವಿ ಸಲ್ಲಿಸಿದರು.
ಹೆಬ್ಬಾಲೆ ವ್ಯಾಪ್ತಿಯ ಅಕ್ರಮ-ಸಕ್ರಮ ಯೋಜನೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಈಗಾಗಲೇ ಬೆಳೆದ ಬೆಳೆಯು ಒಣಗುವ ಹಂತದಲ್ಲಿದೆ ಇದರಿಂದಾಗಿ ಭಾರೀ ನಷ್ಟವಾಗಲಿದೆ. ಮುಂದಿನ ದಿನಗಳಲ್ಲಿ ಸಕ್ರಮ ಮಾಡಿಕೊಳ್ಳಲು ಒಂದು ವರ್ಷದವರೆಗೆ ಕಾಲಾವಕಾಶವನ್ನು ನೀಡಬೇಕೆಂದು ಮತ್ತು ಕಂಬದಿAದ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಕುಶಾಲನಗರದಲ್ಲಿ ಮನವಿ ಮಾಡಿದರು. ಈ ಸಂದರ್ಭ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್, ಹೆಬ್ಬಾಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪರಮೇಶ್ ಸದಸ್ಯರಾದ ಚಂದ್ರಶೇಖರ್, ಜೋಗಿ, ಮಹದೇವ ಗ್ರಾಮದ ಅನೇಕ ಪ್ರಮುಖರು ಇದ್ದರು.