ಚಾಲಕನ ಸ್ಥಿತಿ ಗಂಭೀರ
ಗೋಣಿಕೊಪ್ಪಲು, ಜು.೧: ಲಾರಿ ಹಾಗೂ ಮಾರುತಿ ವ್ಯಾನ್ ನಡುವೆ ಅಪಘಾತ ಸಂಭವಿಸಿದ್ದು ವ್ಯಾನ್ ಚಾಲಕನ ಸ್ಥಿತಿ ಗಂಭೀರವಾಗಿದೆ.
ಶ್ರೀಮAಗಲ ಹೋಬಳಿಯ ಟಿ.ಶೆಟ್ಟಿಗೇರಿ,ತಾವಳಗೇರಿ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ವ್ಯಾನ್ ಚಾಲಕ ಎಂ.ಡಾಲಿ ಎಂಬುವವರ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ಮೇಲೆ ಮೊಕದ್ದಮೆ ದಾಖಲಾಗಿದೆ. ಕೋವಿಡ್ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದರೂ ಗುರುವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ.