ಆಕ್ಷೇಪ ಸಲ್ಲಿಕೆಗೆ ತಾ. ೮ ರವರೆಗೆ ಅವಕಾಶ
ಮಡಿಕೇರಿ, ಜು. ೨: ರಾಜ್ಯದ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬAಧಿಸಿದAತೆ ರಾಜ್ಯ ಚುನಾವಣಾ ಆಯೋಗವು ಪ್ರಸ್ತುತ ಗುರುತಿಸಲಾಗಿರುವ ಕ್ಷೇತ್ರಗಳಿಗೆ ಮೀಸಲಾತಿಯನ್ನು ಪ್ರಕಟಿಸಿದೆ.
ಇದರ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಜುಲೈ ೧ ರಂದು ಪ್ರಕಟಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಂ.ಪಿ. ರಂಜಿತಾ ಅವರು ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಅಧಿಸೂಚನೆ ಬಗ್ಗೆ ಆಕ್ಷೇಪಣೆಯನ್ನು ಸಲ್ಲಿಸಲು ಏಳು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ತಾ. ೮ ರೊಳಗಾಗಿ ಆಕ್ಷೇಪಣೆಗಳಿದ್ದಲ್ಲಿ ಇದಕ್ಕೆ ಪೂರಕ ದಾಖಲಾತಿಗಳೊಂದಿಗೆ ತಾ. ೮ ರೊಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, ೧ನೇ ಮಹಡಿ, ಕೆ.ಎಸ್.ಸಿ.ಎಂ.ಎಫ್. ಕಟ್ಟಡ (ಹಿಂಭಾಗ), ನಂ. ೮, ಕನ್ನಿಂಗ್ ಹ್ಯಾಂ ರಸ್ತೆ, ಬೆಂಗಳೂರು - ೫೬೦೦೫೨ ಇಲ್ಲಿಗೆ ಸಲ್ಲಿಸಬಹುದಾಗಿದೆ. ನಿಗದಿತ ಕಾಲಾವಕಾಶದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಯಪಡಿಸಲಾಗಿದೆ.
ಕ್ಷೇತ್ರಗಳ ವಿವರ - ತಾಲೂಕು ಪಂಚಾಯಿತಿ