ನಾಪೋಕ್ಲು, ಜು.೩: ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವ ವಿದ್ಯಾಲಯ ಮತ್ತು ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯ ಸಹಕಾರ ದೊಂದಿಗೆ ತಾ. ೫ರಂದು (ನಾಳೆ) ಬೆಳಿಗ್ಗೆ ೧೦ ಗಂಟೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕೋವಿಡ್ ಲಸಿಕೆ ಯನ್ನು ಪಡೆಯದ ಕಾಲೇಜಿನ ಪ್ರಾಧ್ಯಾಪಕ ವರ್ಗ, ಅತಿಥಿ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಪತ್ರ ಆಧಾರ್ ಕಾರ್ಡ್ ಹಾಗೂ ಮೊಬೈಲ್‌ನೊಂದಿಗೆ ಲಸಿಕಾ ಕೇಂದ್ರಕ್ಕೆ ಹಾಜರಾಗಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕಾವೇರಿ ಪ್ರಕಾಶ್ ಮತ್ತು ಕೋವಿಡ್ ಲಸಿಕಾ ಕರಣದ ನೋಡಲ್ ಅಧಿಕಾರಿ ಮುದ್ದಪ್ಪ ತಿಳಿಸಿದ್ದಾರೆ.