ಮಡಿಕೇರಿ, ಜು.೨: ಕೋವಿಡ್-೧೯ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ವೋಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ ಆಹಾರ ಸಾಮಗ್ರಿ ಹಾಗೂ ರಕ್ಷಣಾ ಮತ್ತು ನೈರ್ಮಲ್ಯೀಕರಣ ಕಿಟ್ ವಿತರಣಾ ಕಾರ್ಯಕ್ರಮವು ನಡೆಯಿತು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಇವರ ಸಂಯಕ್ತಾಶ್ರಯದಲ್ಲಿ ಮಡಿಕೇರಿ, ಜು.೨: ಕೋವಿಡ್-೧೯ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ವೋಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ ಆಹಾರ ಸಾಮಗ್ರಿ ಹಾಗೂ ರಕ್ಷಣಾ ಮತ್ತು ನೈರ್ಮಲ್ಯೀಕರಣ ಕಿಟ್ ವಿತರಣಾ ಕಾರ್ಯಕ್ರಮವು ನಡೆಯಿತು.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆ ಇವರ ಸಂಯಕ್ತಾಶ್ರಯದಲ್ಲಿ ಸಲಕರಣೆಗಳನ್ನು ಧರಿಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದರು.
ಕೆಲವೊಂದು ಸಾರ್ವಜನಿಕರು ಮತ್ತು ಕಾರ್ಮಿಕರು ಮಾಸ್ಕ್ ಧರಿಸದೇ ಇರುವುದು ಗಮನಕ್ಕೆ ಬಂದಿರುತ್ತದೆ. ಅದರ ಪ್ರತಿಫಲ ಕೊರೊನಾ ಎರಡನೇ ಅಲೆಯ ಪ್ರಭಾವ ಜಿಲ್ಲೆಯಲ್ಲಿ ಉಂಟಾದ ಸಾವು ನೋವುಗಳು. ಕೊರೊನಾ ಮೊದಲನೇ ಅಲೆಯಲ್ಲಿ ಜನರಲ್ಲಿದ್ದ ಭಯ ಮತ್ತು ಬದ್ಧತೆ ಎರಡನೇ ಅಲೆಯಲ್ಲಿ ಕಾಣಿಸಲಿಲ್ಲ. ಅದರ ಪರಿಣಾಮವಾಗಿ ಜಿಲ್ಲೆಯಲ್ಲಿ ೨೭ ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಮತ್ತು ೩೦೦ಕ್ಕೂ ಹೆಚ್ಚು ಜನರು ಮರಣ ಹೊಂದಿದ್ದಾರೆ. ಕೊರೊನಾ ನಿಯಮಾವಳಿಯನ್ನು ಚಾಚು ತಪ್ಪದೇ ಪಾಲಿಸಿದ್ದಲ್ಲಿ ನಾವು ಕೊರೊನಾವನ್ನು ಮಣಿಸಬಹುದು ಎಂದು ಹೇಳಿದರು.
ರಾಜ್ಯ ಸರ್ಕಾರದಿಂದ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡಲಾಗುತ್ತಿದ್ದು ಪ್ರತಿಯೊಬ್ಬರೂ ಅದರ ಸದುಪಯೋಗ ಪಡೆದುಕೊಳ್ಳಬೇಕು. ಮುಖ್ಯವಾಗಿ ಕಾಲೇಜು ಮತ್ತು ಶಾಲಾ ವಿದ್ಯಾರ್ಥಿಗಳು ತಪ್ಪದೇ ವ್ಯಾಕ್ಸಿನ್ ಹಾಕಿಸಿಕೊಳ್ಳಿ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳು ಆರಂಭವಾಗಲಿದ್ದು, ಆರೋಗ್ಯದ ದೃಷ್ಟಿಯಿಂದ ವ್ಯಾಕ್ಸಿನ್ ಪಡೆಯಬೇಕು. ವ್ಯಾಕ್ಸಿನ್ ಉತ್ತಮ ಗುಣಮಟ್ಟವನ್ನು ಹೊಂದಿದ್ದು ನಿಮ್ಮನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದರೆ ಅಂತಹವರಿAದ ದೂರ ಇರಿ. ಎಲ್ಲರೂ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕಾರ್ಮಿಕ ಅಧಿಕಾರಿ ಅನಿಲ್.ಬಿ.ಬಗಟಿ ಭಾಗವಹಿಸಿದ್ದರು. ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA.ಯತ್ನಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ನಗರದ ಕೊಡವ ಹೆರಿಟೆಜ್ ಕಟ್ಟಡ ನಿರ್ಮಾಣ ಸ್ಥಳ ವಿದ್ಯಾನಗರದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಒಟ್ಟು ೩೦ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಿದರು.