ಸೋಮವಾರಪೇಟೆ, ಜೂ. ೨: ಸಮೀಪದ ಹಾನಗಲ್ಲು ಗ್ರಾ.ಪಂ.ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರುಗಳಿಗೆ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು.

ಕೊಡಗು ಮತ್ತು ಮೈಸೂರು ಜಿಲ್ಲೆಯ ಕ್ರೆಡಿಟ್-ಐ ಸಂಸ್ಥೆ ಸಹಯೋಗದೊಂದಿಗೆ ಭಾರತ್ ಜಲ ಜೀವನ್ ಮಿಷನ್ ಯೋಜನೆ ಯಡಿಯಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು. ಜಲಜೀವನ್ ಮಿಷನ್ ಯೋಜನೆಯ ಉದ್ದೇಶ, ಗ್ರಾ.ಪಂ. ವ್ಯಾಪ್ತಿಯಲ್ಲಿ ಯೋಜನೆಯ ಗುರಿ ಮತ್ತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಮಿತಿ ಸದಸ್ಯರುಗಳ ಜವಾಬ್ದಾರಿ ಕುರಿತು ಕಾರ್ಯಾಗಾರದಲ್ಲಿ ಪಾಲ್ಗೊಂಡಸದಸ್ಯರಿಗೆ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಗ್ರಾ.ಪಂ. ಅಧ್ಯಕ್ಷೆ ಲಕ್ಷಿö್ಮ ಪಾಂಡಿಯನ್ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯ ಯಶಾಂತ್‌ಕುಮಾರ್ ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳ ಗ್ರಾಮಸ್ಥರು ಸಮುದಾಯ ವಂತಿಕೆಯನ್ನು ಪಾವತಿಸುವ ಮೂಲಕ ಜಲಜೀವನ್ ಮಿಷನ್ ಯೋಜನೆಯ ಸಹಭಾಗಿತ್ವವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಯು. ಅಸ್ಮಾ, ಐಎಸ್‌ಎ ಸಂಸ್ಥೆಯ ಪ್ರಮುಖ ಮಂಜುನಾಥ್, ವಿ.ಡಬ್ಲೂö್ಯ.ಎಸ್.ಸಿ. ಸಮಿತಿ ಸದಸ್ಯರು, ಗ್ರಾ.ಪಂ. ಸದಸ್ಯರು ಹಾಜರಿದ್ದರು.