ಕೂಡಿಗೆ: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವು ಕೇಂದ್ರದ ಆವರಣದಲ್ಲಿ ನಡೆಯಿತು

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್, ಡಾ. ರಕ್ಷಿತ್ ಮಲೇರಿಯಾ ವಿರೋಧಿ ಮಾಸಾಚರಣೆ ಮೂಲಕ ರೋಗ ತಡೆಗಟ್ಟಲು ಅನುಸರಿಸಲು ಬೇಕಾಗುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್, ಮುಕೇಶ್, ಆರೋಗ್ಯ ಸಂರಕ್ಷಣಾಧಿಕಾರಿ ಸಕೀನಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೆೆÃರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ (ಉದ್ಭವ ಟ್ರಸ್ಟ್) ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚಾರಣೆ-ಜೂನ್ ೨೦೨೧ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶ್ ಪರಮಲೆ, ಆರೋಗ್ಯ ಶಿಕ್ಷಣಾಧಿಕಾರಿ ಡಾ. ಪಾಲಾP

À್ಷ, ತಾಲೂಕು ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ದೇಚಮ್ಮ, ಸಂಪಾಜೆ ಆರೋಗ್ಯ ಕೇಂದ್ರ ಮುಖ್ಯಸ್ಥ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ವರ್ಗ, ಮಾಧ್ಯಮದವರು, ಆಶಾ ಕಾರ್ಯಕತೆಯರು ಪಾಲ್ಗೊಂಡಿದ್ದರು.

ಸಭೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಚೇತನ್ ಅವರು ಮಲೇರಿಯಾ ಜ್ವರ ಹಾಗೂ ಡೆಂಗ್ಯೂ ಜ್ವರದ ಬಗ್ಗೆ ಪ್ರತಿ ಮನೆ ಮನೆಗಳಿಗೆ ಭೇಟಿ ಕೊಟ್ಟು ಜಾಗ್ರತೆ ವಹಿಸಲು ತಿಳಿಸಿ ಖಾಯಿಲೆಯ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕಾರ್ಯಗಳ ಬಗ್ಗೆ ವಿವರಣೆ ನೀಡಿದರು, ಕೋವಿಡ್ ಸಮಯದಲ್ಲಿ ಸಂಪಾಜೆ ಗ್ರಾಮಸ್ಥರಿಗೆ ಬೇಕಾಗುವ ವ್ಯಾಕ್ಸಿನ್ ಲಸಿಕೆಯನ್ನು ಮುಂದಿನ ವಾರದಲ್ಲಿ ಆರೋಗ್ಯ ಇಲಾಖೆಗೆ ತಲುಪಿಸಿ ಗ್ರಾಮಸ್ಥರಿಗೆ ಅತಿ ಶೀಘ್ರವಾಗಿ ತಲುಪಿಸುವ ಭರವಸೆ ನೀಡಿದರು.ಕುಶಾಲನಗರ: ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾ ವರದಿಗಾರರು ಮತ್ತು ಮಾಧ್ಯಮ ಸದಸ್ಯರ ಉಪಸ್ಥಿತಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕೊರೊನಾ ಸೋಂಕು ಹಿನ್ನಲೆಯಲ್ಲಿ ಮಾಧ್ಯಮಗಳ ಮೂಲಕ ಜನರಿಗೆ ಮಲೇರಿಯಾ ನಿರ್ಮೂಲನದ ಬಗ್ಗೆ ಅರಿವು, ಜಾಗೃತಿ ಮೂಡಿಸುವ ಕಾರ್ಯಕ್ರಮ ತಾಲೂಕು ಆರೋಗ್ಯಾಧಿಕಾರಿಗಳ ಕುಶಾಲನಗರ ಕೇಂದ್ರ ಕಚೆÉÃರಿಯಲ್ಲಿ ನಡೆಯಿತು.

ಮಲೇರಿಯಾಕ್ಕೆ ಕಾರಣವಾಗುವ ಸೊಳ್ಳೆಗಳ ಬಗ್ಗೆ ಮಾಹಿತಿ, ಸೊಳ್ಳೆ ಉತ್ಪತ್ತಿ ತಾಣಗಳ ನಾಶ, ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳ ಮೂಲಕ ಆಗಬೇಕಾಗಿದೆ ಎಂದು ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಕರೆ ನೀಡಿದರು. ತಾಲೂಕು ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಚಿಕನ್ ಗುನ್ಯ ಮತ್ತು ೨ ಡೆಂಗ್ಯು ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಕೇಂದ್ರದ ಕೀಟ ಶಾಸ್ತçಜ್ಞ ಜೆ .ಎನ್. ಮಂಜುನಾಥ್, ಮಲೇರಿಯಾ ರೋಗ ಬರದಂತೆ ತಡೆಗಟ್ಟುವ ಕ್ರಮ, ಇದಕ್ಕೆ ಸಂಬAಧಿಸಿದAತೆ ಸ್ಥಳೀಯ ಆಡಳಿತಗಳು ರೂಪಿಸಬೇಕಾದ ಕಾರ್ಯಯೋಜನೆಗಳು ಮತ್ತಿತರ ವಿಷಯಗಳ ಬಗ್ಗೆ ‘ಸ್ಲೆöÊಡ್ ಶೋ’ ಮೂಲಕ ಮಾಹಿತಿ ಒದಗಿಸಿದರು.

ಈ ಸಂದರ್ಭ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪತ್ರಕರ್ತ ಸಂಘದ ಅಧ್ಯಕ್ಷ ರಘು ಹೆಬ್ಬಾಲೆ, ಹಿರಿಯ ಆರೋಗ್ಯ ಸಹಾಯಕರಾದ ಕೆ.ವಿ. ಅಶ್ವಿನಿ, ವಿಶ್ವಜ್ಞ ಮತ್ತಿತರು ಇದ್ದರು.