ಮಡಿಕೇರಿ, ಜು. ೩: ಜಿಲ್ಲೆಯಲ್ಲಿ ಶನಿವಾರ ೧೩೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೨೫ ಆರ್‌ಟಿಪಿಸಿಆರ್ ಮತ್ತು ೧೧ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೪೬, ಸೋಮವಾರಪೇಟೆ ತಾಲೂಕಿನಲ್ಲಿ ೪೬, ವೀರಾಜಪೇಟೆ ತಾಲೂಕಿನಲ್ಲಿ ೪೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೯,೮೪೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೭೭ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೮,೩೩೨ ಮಂದಿ ಗುಣಮುಖ ರಾಗಿದ್ದಾರೆ. ೧೧೩೮ ಸಕ್ರಿಯ ಪ್ರಕರಣಗಳಿದ್ದು, ಒಟ್ಟು ೩೭೫ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೭೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೫.೦೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.