ಕೂಡಿಗೆ, ಜು. ೩: ಕೊಡಗಿನ ಗಡಿ ಭಾಗ ಶಿರಂಗಾಲದಲ್ಲಿರುವ ಅರಣ್ಯ ಇಲಾಖೆಯ ತಪಾಸಣೆಯ ಚೆಕ್‌ಪೋಸ್ಟ್ನಲ್ಲಿ ಲಾಕ್‌ಡೌನ್ ಹಿನ್ನೆಲೆೆ ಜಿಲ್ಲೆಗೆ ಆಗಮಿಸುವ ವಾಹನಗಳ ಪರಿಶೀಲನೆ ಮತ್ತು ಬೈಕ್ ಮತ್ತು ಇತರೆ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ವಿವಿಧ ಇಲಾಖೆಯ ಸಹಕಾರದೊಂದಿಗೆ ನಡೆಯುತ್ತಿದೆ. ಹಾಸನ ಜಿಲ್ಲೆಯ ಮೂಲಕ ಹೊರ ಜಿಲ್ಲೆಯವರು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ಮಾಡಿ ನಂತರ ಕಾದಿರಿಸಿದ ಪುಸ್ತಕದಲ್ಲಿ ನೋಂದಣಿ ಮಾಡಲಾಗುತ್ತಿದೆ. ಈಗಾಗಲೇ ಶಿರಂಗಾಲದಲ್ಲಿ ೧೩೦ ವಾಹನಗಳನ್ನು ತಪಾಸಣೆ ಮಾಡಲಾಗಿದೆ ಅದರಲ್ಲಿ ೪೭ ಜನರಿಗೆ ಹೋಂ ಕ್ವಾರಂಟೈನ್ ಮಾಡಲು ಸೀಲ್ ಹಾಕಲಾಗಿದೆ.

ಚೆಕ್‌ಪೋಸ್ಟ್ನಲ್ಲಿ ಕುಶಾಲನಗರ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಮಧುಸೂದನ್ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಯ ಸಿಬ್ಬಂದಿ, ಅರಣ್ಯ ಇಲಾಖೆ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.