ಕೊಡಗು ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ‘ಶಕ್ತಿ’ಯೊಂದಿಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಸಿ.ಎಂ. ಅನ್‌ಲಾಕ್ ಕುರಿತು ಬೆಂಗಳೂರಿನಲ್ಲಿ ಶನಿವಾರ ನೂತನ ಮಾರ್ಗಸೂಚಿ ಪ್ರಕಟಿಸುವಾಗ ನಾನು ತುಮಕೂರಿನಲ್ಲಿದ್ದೆ. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೆ. ಜಿಲ್ಲೆಯಲ್ಲಿ ಅದರಲ್ಲೂ ಮುಖ್ಯವಾಗಿ ಸೋಮವಾರಪೇಟೆ ತಾಲೂಕಿನಲ್ಲಿ ಇನ್ನೂ ಕೋವಿಡ್ ನಿಯಂತ್ರಣಕ್ಕೆ ಬಂದಿಲ್ಲ. ಇನ್ನು ಹೆಚ್ಚೆಂದರೆ ೫ ದಿನಗಳವರೆಗೆ ಕೊಡಗಿನಲ್ಲಿ ಈಗಿನಂತೆಯೇ ಲಾಕ್‌ಡೌನ್ ಮುಂದುವರಿಯಲಿದೆ. ಬಳಿಕ ಜಿಲ್ಲೆಯಲ್ಲಿ ಎಲ್ಲ ಅಂಗಡಿಗಳನ್ನೂ ತೆರೆಯಲು ಅವಕಾಶ ಮಾಡಿಕೊಡಲಾಗುವುದು.