ಕೂಡಿಗೆ, ಜು. ೪: ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ೬೪ನೇ ಹುಟ್ಟುಹಬ್ಬವನ್ನು ಶ್ರೀಶಕ್ತಿ ಕೇಂದ್ರದ ವೃದ್ಧಾಶ್ರಮದಲ್ಲಿ ವೃದ್ಧರಿಗೆ ಕಿಟ್ ವಿತರಿಸಿ, ಅನ್ನದಾನ ಮಾಡಿ, ಗಿಡ ನೆಟ್ಟು ಸರಳವಾಗಿ ಆಚರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಶ್ರೀಶಕ್ತಿ ವೃದ್ಧಾಶ್ರಮ ಬಾಡಿಗೆ ಕೇಂದ್ರದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸರಕಾರಿ ಜಾಗ ಅಥವಾ ಖಾಲಿ ಇರುವ ಕಟ್ಟಡವನ್ನು ವೃದ್ಧಾಶ್ರಮಕ್ಕೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ನಗರಾಧ್ಯಕ್ಷ ಉಮಾಶಂಕರ್, ಜಿ.ಪಂ. ಮಾಜಿ ಸದಸ್ಯೆ ಮಂಜುಳಾ, ತಾ.ಪಂ. ಮಾಜಿ ಸದಸ್ಯ ಗಣೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗಣಿಪ್ರಸಾದ್, ಬಿಜೆಪಿ ಪ್ರಮುಖರಾದ ವರದ, ಎಂ.ಬಿ. ಜಯಂತ್, ಕೂಡುಮಂಗಳೂರು ಬಿಜೆಪಿ ಘಟಕದ ಅಧ್ಯಕ್ಷ ಮಂಜುನಾಥ್, ಸೇರಿದಂತೆ ಮತ್ತಿತರರು ಇದ್ದರು.