ಕುಶಾಲನಗರ, ಜು. ೪: ೨೦೨೧ ರ ಎಸ್.ಎಸ್.ಎಲ್.ಸಿ. ಪರೀಕ್ಷೆ ಸಂಬAಧಿಸಿದAತೆ ಕುಶಾಲನಗರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವ ಸಿದ್ಧತೆ ಸಭೆ ನಡೆಯಿತು. ಕುಶಾಲನಗರ ಜಿಎಂಪಿ ಶಾಲೆ ಕಚೇರಿಯಲ್ಲಿ ತಾಲೂಕು ತಹಶೀಲ್ದಾರ್ ಗೋವಿಂದ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಅವರು ಮಾತನಾಡಿ, ತಾಲೂಕಿನ ೧೭ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು ೨,೫೯೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಎರಡು ದಿನಗಳ ಕಾಲ ನಡೆಯಲಿರುವ ಪರೀಕ್ಷೆ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದರು. ಈ ಸಂದರ್ಭ ಡಿವೈಎಸ್ಪಿ ಶೈಲೇಂದ್ರ ಕುಮಾರ್, ತಾಲೂಕು ಆರೋಗ್ಯ ಅಧೀಕ್ಷಕಿ ಶಾಂತಿ, ಶಿಕ್ಷಣ ಇಲಾಖೆ ಪ್ರಮುಖರು, ಶಾಲಾ ಮುಖ್ಯಸ್ಥರು ಇದ್ದರು.