ಸೋಮವಾರಪೇಟೆ, ಜು. ೪: ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಗಣಿತ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಬಿ.ಪಿ. ಅನಿತಾ ಅವರನ್ನು ಬೀಳ್ಕೊಡಲಾಯಿತು.

ಕಳೆದ ೩೬ ವರ್ಷಗಳಿಂದ ಜಿಲ್ಲೆಯ ಹಲವಾರು ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಶಿಕ್ಷಕಿ ಬಿ.ಪಿ. ಅನಿತಾ ಅವರನ್ನು ಶಾಲಾಭಿವೃದ್ಧಿ ಸಮಿತಿ, ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಈರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಅಭಿನಂದನಾ ಪತ್ರ ನೀಡಿದರು. ಈ ಸಂದರ್ಭ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ ಸೋಮಶೇಖರ್, ತಾಲೂಕು ಘಟಕದ ಅಧ್ಯಕ್ಷ ಧರ್ಮಪ್ಪ, ಕಾರ್ಯದರ್ಶಿ ನಾಗರಾಜ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಯಾನಂದ, ಐಗೂರು ಪದವಿಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲ ಹೆಚ್.ಕೆ. ಉಮೇಶ್, ಮುಖ್ಯ ಶಿಕ್ಷಕ ಎಂ.ಎA. ಯಶ್‌ವಂತ್ ಕುಮಾರ್, ಸಹ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.