ಕೂಡಿಗೆ, ಜು. ೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸಂದರ್ಭ ನಿವಾಸಿಗಳಿಗೆ ತೊಂದರೆಯಾದಲ್ಲಿ ಕೂಡಿಗೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ಸ್ಥಾಪಿಸುವ ಸಂಬAಧ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್, ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಅಭಿವೃದ್ಧಿ ಅಧಿಕಾರಿ ಆಯಿಷಾ, ಕಾರ್ಯದರ್ಶಿ ಶಿಲ್ಪಾ, ಸಿಬ್ಬಂದಿಗಳಾದ ಅನಿಲ್, ಬಾಪು, ಶಶಿಧರ್ ಇದ್ದರು.