ಮಡಿಕೇರಿ, ಜು. ೪: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಡಿಕೇರಿಯ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು.

ರಾಜಾಸೀಟ್ ಉದ್ಯಾನವನಕ್ಕೂ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಾಂಡು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು.