ಮಡಿಕೇರಿ, ಜು. ೪: ಕೊಡಗು ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಮೃತರ ಅಂತ್ಯಕ್ರಿಯೆ ಸಂಬAಧಿತ ಪಿಂಡಪ್ರದಾನ ಕಾರ್ಯಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಮಾರ್ಗಸೂಚಿಸಿಯನ್ನು ಗಮನದಲ್ಲಿರಿಸಿಕೊಂಡು, ಸಂಬAಧಪಟ್ಟ ದೇವಾಲಯ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡು ಗರಿಷ್ಠ ೫ ಮಂದಿ ಮೀರದಂತೆ ನಡೆಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಪಿಂಡಪ್ರದಾನ ಕಾರ್ಯ ನೆರವೇರಿಸಲು ತಾ. ೫ ರಿಂದ ೧೯ರ ತನಕ ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೨ ಗಂಟೆಯ ತನಕ ಅವಕಾಶ ನೀಡಲಾಗಿದೆ ಎಂದು ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಪಿಂಡ ಪ್ರದಾನ ಅರ್ಚಕರು ಹಾಗೂ ಮುಡಿ ತೆಗೆಯುವವರು ಪಿಂಡಪ್ರದಾನ ನೆರವೇರಿಸಲು ಆದೇಶಿಸಿದ್ದು, ಪಿಂಡಪ್ರದಾನ ಸಮಯದಲ್ಲಿ ಕುಟುಂಬದ ಗರಿಷ್ಠ ೫ ಮಂದಿ ಭಕ್ತಾಧಿಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಿಯಮ ರೂಪಿಸಲಾಗಿದೆ ಎಂದು ಪ್ರಕಟಣೆ ಯಲ್ಲಿ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.