ಮಡಿಕೇರಿ, ಜು. ೫: ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ ಮತ್ತು ಜಿಲ್ಲೆಯ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತಾ. ೬ ರಂದು ಬೆಳಿಗ್ಗೆ ೧೦ ಗಂಟೆಯಿAದ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜು, ಇಲ್ಲಿನ ೧೮ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಆಯಾಯ ಕಾಲೇಜುಗಳ ಬೋಧಕ ಸಿಬ್ಬಂದಿಗಳು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿದೆ. ಒಂದು ವೇಳೆ ಪಾಸಿಟಿವ್ ಬಂದಿದ್ದಲ್ಲಿ ಅಂತಹವರು ೯೦ ದಿನಗಳ ನಂತರ ಲಸಿಕೆಯನ್ನು ಪಡೆಯಲು ತಿಳಿಸಿದೆ.
ಕೋವಿಡ್ ಲಸಿಕೆಯನ್ನು ಪಡೆಯದ ಕಾಲೇಜಿನ ಪ್ರಾಧ್ಯಾಪಕ ವರ್ಗ, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಪತ್ರ, ಆಧಾರ್ ಕಾರ್ಡ್ ಹಾಗೂ ಮೊಬೈಲ್ನೊಂದಿಗೆ ಹಾಜರಾಗಬೇಕು. ಭಾಗವಹಿಸುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ಕಾರ್ಯಕ್ರಮಕ್ಕೆ ದೂರದ ಊರಿನಿಂದ ಬರುವಂತಹ ವಿದ್ಯಾರ್ಥಿಗಳು ಚೆಕ್ಪೋಸ್ಟ್ಗಳಲ್ಲಿ ತಮ್ಮ ಐಡಿ ಕಾರ್ಡ್ ತೋರಿಸಿ ಲಸಿಕಾಕರಣಕ್ಕೆ ತೆರಳಬಹುದಾಗಿದೆ ಎಂದು ಕೊಡಗು ಜಿಲ್ಲೆಯ ಲೀಡ್ ಕಾಲೇಜಿನ ಪ್ರಾಂಶುಪಾಲರು ಮತ್ತು ಕೋವಿಡ್ ಲಸಿಕಾಕರಣದ ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.