ದ್ವಿತೀಯ ಪಿ.ಯು.ಸಿ. ಫಲಿತಾಂಶ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಜು. ೫: ಕೋವಿಡ್-೧೯ ಸೋಂಕು ಪ್ರಸರಣದಿಂದಾಗಿ ೨೦೨೦-೨೧ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆ ಅಭ್ಯರ್ಥಿಗಳನ್ನು ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿ.ಯು.ಸಿ. ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ ಪ್ರಕಟಣೆಗೆ ಕ್ರಮ ವಹಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಒಂದುವೇಳೆ ಘೋಷಿತ ಫಲಿತಾಂಶದಿAದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ ಎಂದು ಸುರೇಶ್ಕುಮಾರ್ ತಿಳಿಸಿದ್ದಾರೆ. ಈ ವರ್ಷ ದ್ವಿತೀಯ ಪಿ.ಯು.ಸಿ. ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಸುರೇಶ್ಕುಮಾರ್ ತಿಳಿಸಿದ್ದಾರೆ. ಕೋವಿಡ್-೧೯ ಸೋಂಕು ಪ್ರಸರಣದ ಹಿನ್ನೆಲೆ ೨೦೨೦-೨೧ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲು ಇಲಾಖೆ ನಿರ್ಧರಿಸಿದೆ ಎಂದು ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಟ ಉತ್ತೀರ್ಣ ಅಂಕಗಳನ್ನು ಮತ್ತು ಶೇ. ೫ ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕೋವಿಡ್-೧೯ ಸೋಂಕು ಪ್ರಸರಣದ ಹಿನ್ನೆಲೆ ೨೦೨೦-೨೧ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳನ್ನು ರದ್ದುಗೊಳಿಸಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡಿದ್ದ ವಿಷಯಕ್ಕೆ ಸಂಬAಧಿಸಿದAತೆ ಪುನರಾವರ್ತಿತ ಅಭ್ಯರ್ಥಿಗಳನ್ನೂ ಸಹ ಉತ್ತೀರ್ಣಗೊಳಿಸಬೇಕೆಂದು ಕೆಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸುವ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸರ್ಕಾರದ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ ಎಂದು ಸುರೇಶ್ಕುಮಾರ್ ತಿಳಿಸಿದ್ದಾರೆ.
ಶೀಘ್ರದಲ್ಲೇ ಎಲ್ಲ ದೇಶಗಳಲ್ಲಿಯೂ ಕೋವಿನ್ ಪ್ಲಾಟ್ ಫಾರಂ ಲಭ್ಯ
ನವದೆಹಲಿ, ಜು. ೫: ಕೋವಿಡ್ ಲಸಿಕೆ ಅಭಿಯಾನಕ್ಕಾಗಿ ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿರುವ ಕೋವಿನ್ ಪ್ಲಾಟ್ ಫಾರಂನ್ನು ಓಪನ್ ಸೋರ್ಸ್ ಆಗಿ ಇಡಲಾಗುವುದು, ಶೀಘ್ರದಲ್ಲಿಯೇ ಇದು ಎಲ್ಲಾ ರಾಷ್ಟçಗಳಲ್ಲಿಯೂ ಲಭ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಂಕ್ರಾಮಿಕ ತಡೆಗಟ್ಟುವ ನಿಟ್ಟಿನಲ್ಲಿ ಅದರ ಪರಿಣಿತಿ ಮತ್ತು ಸಂಪನ್ಮೂಲವನ್ನು ಜಾಗತಿಕ ಸಮುದಾಯದೊಂದಿಗೆ ಹಂಚಿಕೊಳ್ಳಲು ಭಾರತ ಬದ್ಧವಾಗಿರುವುದಾಗಿ ಅವರು ಪ್ರತಿಪಾದಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕೋವಿನ್ ಜಾಗತಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಯಾವುದೇ ರಾಷ್ಟç, ಎಷ್ಟೇ ಶಕ್ತಿಯುತವಾಗಿದ್ದರೂ, ಈ ಸಾಂಕ್ರಾಮಿಕ ರೋಗದಂತಹ ಸವಾಲನ್ನು ಪ್ರತ್ಯೇಕವಾಗಿ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ಅನುಭವ ತೋರಿಸಿದೆ. ಈ ಹೋರಾಟದಲ್ಲಿ ನಮ್ಮ ಅನುಭವಗಳು, ಪರಿಣತಿ ಮತ್ತು ಸಂಪನ್ಮೂಲಗಳನ್ನು ಜಾಗತಿಕ ಸಮುದಾಯಗಳೊಂದಿಗೆ ಹಂಚಿಕೊಳ್ಳಲು ಭಾರತ ಬದ್ಧವಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ವಿಶ್ವದೊಂದಿಗೆ ಹಂಚಿಕೊಳ್ಳಲು ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿದರು. ಕೋವಿಡ್-೧೯ ವಿರುದ್ಧದ ಭಾರತದ ಹೋರಾಟಕ್ಕೆ ತಂತ್ರಜ್ಞಾನವು ಅವಿಭಾಜ್ಯ ಅಂಗವಾಗಿದೆ. ಅದೃಷ್ಟವಶಾತ್, ಸಾಫ್ಟ್ವೇರ್ ಒಂದು ಸಂಪನ್ಮೂಲಗಳಿಲ್ಲದ ಕ್ಷೇತ್ರವಾಗಿದೆ. ಅದಕ್ಕಾಗಿಯೇ ನಾವು ಕೋವಿಡ್ ಪತ್ತೆಹಚ್ಚುವಿಕೆ ಮತ್ತು ಟ್ರಾö್ಯಕಿಂಗ್ ಆ್ಯಪ್ ಅನ್ನು ತಾಂತ್ರಿಕವಾಗಿ ಕಾರ್ಯಸಾಧ್ಯವಾದ ಕೂಡಲೇ ತೆರೆದಿದ್ದೇವೆ. ಸಾಂಕ್ರಾಮಿಕದಿAದ ಯಶಸ್ವಿಯಾಗಿ ಹೊರಹೊಮ್ಮುವಲ್ಲಿ ಲಸಿಕೆ ಉತ್ತಮ ಭರವಸೆಯಾಗಿದೆ ಎಂದು ಪ್ರತಿಪಾದಿಸಿದ ಮೋದಿ, ನಮ್ಮ ಲಸಿಕೆ ಕಾರ್ಯತಂತ್ರ ಯೋಜನೆಯಲ್ಲಿ ಸಂಪೂರ್ಣ ಡಿಜಿಟಲ್ ವಿಧಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಟೋಕಿಯೊ ಒಲಿಂಪಿಕ್ಸ್ ಸಮಾರಂಭದಲ್ಲಿ ತ್ರಿವರ್ಣ ಧ್ವಜ
ನವದೆಹಲಿ, ಜು. ೫: ಟೋಕಿಯೊ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ಮತ್ತು ಪುರುಷರ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ತ್ರಿವರ್ಣ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ. ಕುಸ್ತಿಪಟು ಭಜರಂಗ್ ಪುನಿಯಾ ಆಗಸ್ಟ್ ೮ ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಧ್ವಜ ಧಾರಕರಾಗಲಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಈ ನಿರ್ಧಾರವನ್ನು ಕ್ರೀಡಾಕೂಟದ ಸಂಘಟನಾ ಸಮಿತಿಗೆ ತಿಳಿಸಿದೆ. ಮೊದಲನೆಯದಾಗಿ, ಮುಂಬರುವ ಟೋಕಿಯೊ ಕ್ರೀಡಾಕೂಟದಲ್ಲಿ ಲಿಂಗ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಒಂದು ಗಂಡು, ಮತ್ತು ಓರ್ವ ಮಹಿಳೆ ಇಬ್ಬರು ಧ್ವಜ ಧಾರಕರನ್ನು ಹೊಂದಿರಲಿದೆ ಎಂದು ಇತ್ತೀಚೆಗೆ ಐಒಎ ಮುಖ್ಯ ಮುಖ್ಯಸ್ಥ ನರಿಂದರ್ ಬಾತ್ರಾ ತಿಳಿಸಿದ್ದರು. ರಿಯೊ ಡಿ ಜನೈರೊದಲ್ಲಿ ನಡೆದ ೨೦೧೬ರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ದೇಶದ ಏಕೈಕ ವೈಯಕ್ತಿಕ ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಅವರು ಧ್ವಜಾರೋಹಣ ಮಾಡಿದರು. ಟೋಕಿಯೊ ಕ್ರೀಡಾಕೂಟವು ತಾ. ೨೩ ರಂದು ಪ್ರಾರಂಭವಾಗಲಿದೆ. ಕ್ರೀಡಾಕೂಟದಲ್ಲಿ ೧೦೦ಕ್ಕೂ ಹೆಚ್ಚು ಭಾರತೀಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಕ್ರೀಡಾಕೂಟವನ್ನು ಒಂದು ವರ್ಷ ಮುಂದೂಡಲ್ಪಟ್ಟಿತು.
ಬ್ಲ್ಯಾಕ್ ಫಂಗಸ್ ಪ್ರಕರಣಗಳಲ್ಲೂ ಇಳಿಕೆ!
ಬೆಂಗಳೂರು, ಜು. ೫: ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಜೊತೆ ಜೊತೆಗೆ ಬ್ಲ್ಯಾಕ್ ಫಂಗಸ್ ಅಬ್ಬರ ಕೂಡ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವೇಳೆ ಒಟ್ಟಾರೆ ೩,೩೮೧ ಕೇಸ್ ಪತ್ತೆಯಾಗಿದ್ದು, ೨೮೧ ಮಂದಿ ಸಾವನ್ನಪ್ಪಿದ್ದಾರೆ. ಈ ೩,೩೮೧ ಪ್ರಕರಣಗಳಲ್ಲಿ ಬೆಂಗಳೂರು ಒಂದರಲ್ಲಿಯೇ ೧,೦೬೮ ಕೇಸ್ ಪತ್ತೆಯಾಗಿದ್ದು, ೮೭ ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಕೊರೊನಾ ಸೋಂಕು ಇಳಿಕೆಯಾಗುತ್ತಿರುವ ನಡುವಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ ಕೂಡ ಇಳಿಕೆಯಾಗುತ್ತಿದೆ ಎಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಕರ್ತವ್ಯನಿರ್ವಹಿಸುತ್ತಿರುವ ವೈದ್ಯರು ಹೇಳಿದ್ದಾರೆ. ಈ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆ ಈ ಸೋಂಕಿನ ಚಿಕಿತ್ಸೆಗೆ ನೀಡಲಾಗುವ ಆಂಫೊಟೆರಿಸಿನ್-ಬಿ ಔಷಧಿ ದಾಸ್ತಾನು ಸಾಕಷ್ಟಿದೆ ಎಂದು ಹೇಳಲಾಗುತ್ತಿದೆ. ಮ್ಯೂಕೋರ್ಮೈಕೋಸಿಸ್ ರೋಗಿಗಳಿಗೆ ಚಿಕಿತ್ಸೆ ನೀಡುವ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ರತಿದಿನ ಕೇವಲ ೧-೨ ಪ್ರಕರಣಗಳಷ್ಟೇ ಕಂಡು ಬರುತ್ತಿದ್ದು, ಈ ಹಿಂದೆ ಈ ಸಂಖ್ಯೆ ಹೆಚ್ಚಾಗಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ. ರಾಜ್ಯದಲ್ಲಿ ಮ್ಯೂಕೋರ್ಮೈಕೋಸಿಸ್ ಪ್ರಕರಣಗಳ ಸಂಖ್ಯೆ ಶೇ. ೫೦ರಷ್ಟು ಇಳಿಕೆಯಾಗಿದೆ. ನಮ್ಮಲ್ಲಿ ಇಎನ್ಟಿ ವೈದ್ಯರು, ನರಶಸ್ತçಚಿಕಿತ್ಸಕರು, ನೇತ್ರಶಾಸ್ತçಜ್ಞರು, ಫೇಶಿಯೊ-ಮ್ಯಾಕ್ಸಿಲ್ಲರಿ ಶಸ್ತçಚಿಕಿತ್ಸಕರು ಮತ್ತು ಇತರೆ ವೈದ್ಯರ ತಂಡವಿದ್ದು, ಈವರೆಗೂ ೧೦೦ ಹೆಚ್ಚು ಶಸ್ತçಚಿಕಿತ್ಸೆಗಳನ್ನು ನಡೆಸಲಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಇಎನ್ಟಿ ವಿಭಾಗದ ಮುಖ್ಯಸ್ಥ ಹಾಗೂ ಪ್ರೊ. ಡಾ. ವಿಶ್ವನಾಥ್ ಅವರು ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಸಂಭವಿಸುವ ಪ್ರತೀ ಸಾವಿನ ಕಾರಣಗಳ ಕುರಿತು ಚರ್ಚೆ ನಡೆಸಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಭೆ ನಡೆಸಲಾಗುತ್ತಿದ್ದು, ಬ್ಲ್ಯಾಕ್ ಫಂಗಸ್ಗಿAತಲೂ ಕೋವಿಡ್ನಿಂದಾಗಿಯೇ ಹೆಚ್ಚಿನ ಜನರು ಸಾವನ್ನಪ್ಪುತ್ತಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.