ಮಡಿಕೇರಿ, ಜು. ೫: ಬಿಗಿನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಗೆ ಆಗಮಿಸಿದ ಪ್ರವಾಸಿಗರಿಗೆ ಪೊಲೀಸರು ದಂಡ ವಿಧಿಸಿ ವಾಪಸ್ ಕಳುಹಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ತೂರು ಗ್ರಾಮಕ್ಕೆ ೮ ಮಂದಿ ಪ್ರವಾಸಿಗರು ಆಗಮಿಸಿದ್ದಾರೆ ಎಂದು ಸ್ಥಳೀಯರು ೧೧೨ ತುರ್ತು ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಾಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿದಾಗ ಪ್ರವಾಸಿಗರು ಗುಲ್ಬರ್ಗ ಮೂಲದವರು ಎಂದು ತಿಳಿದು ಬಂದಿದೆ. ಅವರಿಗೆ ಪೊಲೀಸರು ದಂಡ ವಿಧಿಸಿ ಎಚ್ಚರಿಸಿ ವಾಪಸ್ ಕಳುಹಿಸಿದ್ದಾರೆ.