ಚೆಟ್ಟಳ್ಳಿ, ಜು. ೫: ಕಾಲೇಜು ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು.
ಇಲ್ಲಿ ನಡೆದ ವ್ಯಾಕ್ಸಿನೇಷನ್ ವಿತರಣಾ ಕಾರ್ಯಕ್ರಮಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಸುಮಾರು ೩೬೮ ವಿದ್ಯಾರ್ಥಿಗಳು, ೩೮ ಬೋಧಕರು ೬ ಬೋಧಕೇತರ ವರ್ಗದವರು ಕೊವ್ಯಾಕ್ಸಿನ್ ಲಸಿಕೆ ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮುಂತಾದವರು ಉಪಸ್ಥಿತರಿದ್ದರು.