ಭಾಗಮಂಡಲ, ಜು. ೫: ಮೃತಪಟ್ಟವರ ಅಂತ್ಯಕ್ರಿಯೆ ಸಂಬAಧಿತ ಪಿಂಡ ಪ್ರದಾನ ಕಾರ್ಯಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದಿನಿAದಲೇ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ಕಾರ್ಯ ಆರಂಭಗೊAಡಿದೆ.
ತ್ರಿವೇಣಿ ಸಂಗಮಕ್ಕೆ ಆಗಮಿಸುತ್ತಿರುವ ಸ್ಥಳೀಯರು ಕೋವಿಡ್ ನಿಯಮಾನುಸಾರ ಪಿಂಡ ಪ್ರದಾನ ಮಾಡಿ ತೆರಳುತ್ತಿದ್ದಾರೆ. ಕೋವಿಡ್ ಲಾಕ್ಡೌನ್ ಇನ್ನೂ ಕೂಡ ಸಡಿಲಿಕೆಯಾಗದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶದಂತೆ ಪಿಂಡ ಪ್ರದಾನಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ. ದೇವಾಲಯಗಳಲ್ಲಿ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಾಲಯ ಸಮಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ. -ಸುನಿಲ್