ಮಡಿಕೇರಿ, ಜು. ೫: ಜಿಲ್ಲೆಯಲ್ಲಿ ತಾ. ೪ ರಂದು ಆರ್‌ಟಿಪಿಸಿ ಲ್ಯಾಬ್ ಸ್ಯಾನಿಟೈಜೇಷನ್ ಸಂಬAಧ ಮುಚ್ಚಲ್ಪಟ್ಟಿದ್ದು, ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮಾತ್ರ ಕೋವಿಡ್ ಫಲಿತಾಂಶ ನೀಡಲಾಗಿದೆ. ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಸೋಮವಾರ ೧೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೧, ಸೋಮವಾರಪೇಟೆ ತಾಲೂಕಿನಲ್ಲಿ ೧೫, ವೀರಾಜಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೦೪೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿ ಯಲ್ಲಿ ೧೬೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೮,೭೬೭ ಮಂದಿ ಗುಣಮುಖ ರಾಗಿದ್ದಾರೆ. ೯೦೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೨ ಸಾವು ಉಂಟಾಗಿದ್ದು, ಒಟ್ಟು ೩೭೭ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೫೮ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೬.೧೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.