ಮಡಿಕೇರಿ, ಜು. ೫: ಕಂದಾಯ ಸಚಿವ ಆರ್. ಅಶೋಕ ಅವರು ತಾ. ೬ ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ೧ ಗಂಟೆಗೆ ಕುಶಾಲನಗರ ನೂತನ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ ೨.೩೦ ಗಂಟೆಗೆ ನಗರದ ಜಿ.ಪಂ. ಸಭಾಂಗಣದಲ್ಲಿ ಮಳೆ ಹಾನಿ ಪರಿಹಾರ ಹಾಗೂ ಮುಂಜಾಗ್ರತಾ ಕ್ರಮಗಳ ಸಂಬAಧ ಪರಿಶೀಲನಾ ಸಭೆ ನಡೆಸಲಿದ್ದಾರೆ. ೩.೩೦ ಗಂಟೆಗೆ ಭೂಕುಸಿತ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಸಂಜೆ ೫ ಗಂಟೆಗೆ ಭಾರತೀಯ ವಿದ್ಯಾ ಭವನದಲ್ಲಿ ಭುವನಂ ಫೌಂಡೇಶನ್ ಹಾಗೂ ಗ್ರೀನ್‌ಸಿಟಿ ಫೋರಂ ವತಿಯಿಂದ ೫೦ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ. ಆರ್. ಪ್ರಶಾಂತ್ ತಿಳಿಸಿದ್ದಾರೆ.