ಮಡಿಕೇರಿ, ಜು. ೫: ಕೊಡಗು ಜಿಲ್ಲೆಯಲ್ಲಿ ಮುಂದುವರಿಸಿರುವ ಲಾಕ್ ಡೌನ್ ನ್ನು ಕೂಡಲೇ ತೆರವುಗೊಳಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಮುಖಂಡ ಮಿಟ್ಟು ಚಂಗಪ್ಪ ಅವರು ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಮಿಟ್ಟು ಚಂಗಪ್ಪ ಅವರು ರಾಜ್ಯಾದ್ಯಂತ ಎಲ್ಲಾ ಕಡೆ ಲಾಕ್‌ಡೌನ್ ತೆರವುಗೊಳಿಸಿದ್ದರು ಕೊಡಗಿನಲ್ಲಿ ಮುಂದುವರಿಸಿರುವುದು ಅವೈಜ್ಞಾನಿಕ ಕ್ರಮ ಎಂದು ಟೀಕಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಜಾಗೃತಿ ಕ್ರಮ ಕೈಗೊಳ್ಳಬೇಕು. ಹಾಗೇನೆ ಇಲ್ಲಿನ ಜನರ ಶೋಚನೀಯ ಸ್ಥಿತಿಯ ಬಗ್ಗೆ ಕೂಡ ಸರ್ಕಾರ ಗಮನಹರಿಸಬೇಕು.

ಕೊಡಗಿನಲ್ಲಿ ಲಾಕ್‌ಡೌನ್ ತೆರವುಗೊಳಿಸಲು ಮಿಟ್ಟು ಚಂಗಪ್ಪ ಒತ್ತಾಯ

(ಮೊದಲ ಪುಟದಿಂದ) ನಿರಂತರ ಲಾಕ್‌ಡೌನ್‌ನಿಂದ ಕೊಡಗಿನ ಕಾರ್ಮಿಕರು, ರೈತರು, ವ್ಯಾಪಾರಿಗಳು, ಪ್ರವಾಸೋದ್ಯಮವನ್ನೇ ಅವಲಂಬಿಸಿ ರುವವರು, ಒಂದು ಹೊತ್ತಿನ ತುತ್ತಿಗೂ ಪರದಾಡುವಂತಾಗಿದೆ. ಹೋಂ ಸ್ಟೇ ನಡೆಸುವವರು ಕರೆಂಟ್ ಬಿಲ್ ಕಟ್ಟಲೂ ಅಸಹಾಯಕರಾಗಿದ್ದಾರೆ. ಕಾರ್ಮಿಕರ ಸಮಸ್ಯೆಯಿಂದ ಕಾಫಿ ತೋಟಗಳು ಹಾಳಾಗುತ್ತಿದ್ದು, ಇವರ ಮುಂದಿನ ಜೀವನದ ಬಗ್ಗೆ ಆತಂಕವಾಗುತ್ತಿದೆ. ಸರ್ಕಾರ ಮತ್ತು ಅಧಿಕಾರಿಗಳು ಅಂಕಿ ಅಂಶಗಳ ಹಾವು ಏಣಿ ಆಟದಲ್ಲಿ ನಿರತರಾಗಿದ್ದಾರೆಯೇ ಹೊರತು ಜನರ ಸಮಸ್ಯೆ ಬಗ್ಗೆ ಕಾಳಜಿ ವಹಿಸುತ್ತಿಲ್ಲವೆಂದು ಮಿಟ್ಟು ಚಂಗಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.