ಮಡಿಕೇರಿ, ಜು. ೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಕೊಡವ ಭಾಷೆ, ಸಂಸ್ಕೃತಿ, ಆಚಾರ-ವಿಚಾರ, ಕಲೆ, ಜಾನಪದ ಹಾಗೂ ಇನ್ನಿತರ ಕೊಡಗಿಗೆ ಸಂಬAಧಿಸಿದ ವಿಷಯದ ಕುರಿತಾದ ಸಂಶೋಧನೆಯನ್ನು ಪ್ರೋತ್ಸಾಹಿಸಲು ಪ್ರತಿ ವರ್ಷದಂತೆ ಫೆಲೋಶಿಪ್ಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಕಳೆದ ವರ್ಷ ಫೆಲೋಶಿಪ್ ಪಡೆದುಕೊಂಡವರು ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ತಾ. ೨೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟಾçರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಸ್ಕೌಟ್ಸ್ ಭವನ, ಮ್ಯಾನ್ಸ್ ಕಾಂಪೌAಡ್, ಮಡಿಕೇರಿ ದೂ. ೦೮೨೭೨-೨೨೯೦೭೪ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.