ಮಡಿಕೇರಿ, ಜು. ೬: ರಾಜ್ಯ ಸರ್ಕಾರದ ವಿವಿಧ ರಿಯಾಯಿತಿ ಬಡ್ಡಿ ದರದ ಸಾಲ ಯೋಜನೆಗಳನ್ನು ಸಹಕಾರ ಸಂಸ್ಥೆಗಳ ಮೂಲಕ ಅನುಷ್ಠಾನಗೊಳಿಸಿದ್ದು, ಈ ಯೋಜನೆಗಳಡಿ ಡಿ.ಸಿ.ಸಿ. ಬ್ಯಾಂಕ್ ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಸಾಲದ ಪ್ರಯೋಜನ ಪಡೆಯುತ್ತಿರುವ ಜಿಲ್ಲೆಯ ಫಲಾನುಭವಿ ರೈತರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಾ. ೭ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿ.ಪಂ. ಸಭಾಂಗಣದಲ್ಲಿ ಸಾಂಕೇತಿಕವಾಗಿ ಸಾಲ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.