ಮಡಿಕೇರಿ, ಜು. ೬: ನಗರದ ಚಾಮುಂಡೇಶ್ವರಿ ನಗರಕ್ಕೆ ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೂಕುಸಿತದಿಂದ ಬಡಾವಣೆಯ ಕೆಲವೆಡೆ ಬಿರುಕುಬಿಟ್ಟಿದ್ದು ಇಲ್ಲಿನ ನಿವಾಸಿಗಳು ಈ ಸಂದರ್ಭದಲ್ಲಿ ಸ್ಥಳಾಂತರ ಆಗಬೇಕಾದ ಅನಿವಾರ್ಯತೆ ಇದೆ. ಸ್ಥಳಾಂತರಕ್ಕೆ ಒಪ್ಪದಿದ್ದಲ್ಲಿ ಬಲವಂತವಾಗಿ ಸ್ಥಳಾಂತರ ಮಾಡಬೇಕಾಗುತ್ತದೆ. ಹಾಗಾಗಿ ಸ್ಥಳೀಯರು ಸಹಕಾರ ನೀಡಬೇಕೆಂದು ಕೋರಿದರು.
ಈ ಸಂದರ್ಭ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ನಗರಸಭೆ ಆಯುಕ್ತ ರಾಮದಾಸ್ ಸೇರಿದಂತೆ ಇನ್ನಿತರರು ಇದ್ದರು.