ಮಡಿಕೇರಿ, ಜು. ೬: ಜಿಲ್ಲೆಯಲ್ಲಿ ಮಂಗಳವಾರ ೮೦ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೬೩ ಆರ್ಟಿಪಿಸಿಆರ್ ಮತ್ತು ೧೭ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ೪೬, ಸೋಮವಾರಪೇಟೆ ತಾಲೂಕಿನಲ್ಲಿ ೨೩, ವೀರಾಜಪೇಟೆ ತಾಲೂಕಿನಲ್ಲಿ ೧೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೧೨೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೮,೮೨೩ ಮಂದಿ ಗುಣಮುಖರಾಗಿದ್ದಾರೆ. ೯೨೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಒಟ್ಟು ೩೭೭ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೧೬೦ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೨.೬೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.