ಗೋಣಿಕೊಪ್ಪಲು, ಜು. ೬ : ಟಿ. ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ವೆಸ್ಟ್ ನೆಮ್ಮಲೆ ಗ್ರಾಮದ ಚೊಟ್ಟೆಯಾಂಡಮಾಡ ಉದಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯ ಕ್ರಮದಲ್ಲಿ ಈ ಆಯ್ಕೆ ನಡೆಯಿತು. ಈ ವೇಳೆ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಕ್ಕಾಟೀರ ಸಂದೀಪ್ ಅಧಿಕಾರ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮುಕ್ಕಾಟೀರ ಶಿವು ಮಾದಪ್ಪ, ತಾಲೂಕು ಪಂಚಾಯಿತಿ ಸದಸ್ಯ ಪಲ್ವಿನ್ ಪೂಣಚ್ಚ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಎಂ. ಬಾಲಕೃಷ್ಣ ಹಿರಿಯ ಮುಖಂಡರಾದ ಎ.ಪಿ. ಮೋಟಯ್ಯ, ಪೆಮ್ಮಂಡ ರಾಜ ಕುಶಾಲಪ್ಪ, ತಿತೀರ ಪ್ರಭು, ಸಿ.ಎನ್. ವಿಶ್ವನಾಥ್ ಸೋಶಿಯಲ್ ಮೀಡಿಯಾ ಅಧ್ಯಕ್ಷ ಮಂಜು ಸೋಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.