ಮಡಿಕೇರಿ, ಜು. ೬ : ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ಘಟಕ (ಎನ್‌ಎಸ್‌ಎಸ್) ಯೂತ್ ರೆಡ್‌ಕ್ರಾಸ್, ರೇಂಜರ್, ರೆಡ್ ರಿಬ್ಬನ್ ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾ. ೩ ರಂದು ಉಚಿತ ಕೋವಿಡ್ ಲಸಿಕಾಕರಣ ನಡೆಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಲಸಿಕೆಯನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ. ಡಿ.ಜೆ. ಜವರಪ್ಪ, ಡಾ. ಪೂಜಾ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.