ಮಡಿಕೇರಿ, ಜು. ೬: ಚಿತ್ರನಟ ಭುವನ್ ಹಾಗೂ ನಟಿ ಹರ್ಷಿಕಾ ಪೂಣಚ್ಚ ಅವರ ಭುವನಂ ಫೌಂಡೇಷನ್ ವತಿಯಿಂದ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ನೀಡಿದ ೫೦ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಕಂದಾಯ ಸಚಿವ ಆರ್.ಅಶೋಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ಇದರೊಂದಿಗೆ ‘ಜೀವಬೇಕು ಲಸಿಕೆ ಹಾಕು’ ಲಸಿಕಾ ಅಭಿಯಾನ, ಜಾಗೃತಿ ವಾಹನಗಳಿಗೆ ಇದೇ ಸಂದರ್ಭ ಸಚಿವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಎತ್ತರದ ಸ್ಥಾನಕ್ಕೆ ಹೋದ ಬಳಿಕ ತಮ್ಮ ಮೂಲವನ್ನು ಇಂದಿನ ಯುವಕರು ಮರೆಯುತ್ತಿದ್ದಾರೆ. ಭುವನ್ ಪೊನ್ನಣ್ಣ ಅವರು ಸಾಮಾಜಿಕ ಸೇವೆ ಮಾಡುತ್ತ ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ. ಹುಟ್ಟಿದ ನಾಡನ್ನು ಮರೆಯದೆ ಸಂಕಷ್ಟದ ಸಮಯದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದು ಶ್ಲಾಘನೀಯ. ಮನರಂಜನ ಮಾಧ್ಯಮ ಅತ್ಯಂತ ಪರಿಣಾಮಕಾರಿಯಾಗಿದ್ದು, ತಮ್ಮ ಸ್ವಂತ ಹಣವನ್ನು ಸಮಾಜಕ್ಕೆ ವ್ಯಯಿಸುತ್ತಿರು ವುದು ಮಾದರಿಯಾಗಿದೆ. ಕೋವಿಡ್ ಜಿಲ್ಲೆಗಳ ೨೫ ಸಾವಿರ ಕುಟುಂಬಗಳಿಗೆ ಆಹಾರ ಕಿಟ್, ಔಷಧಿ, ಮಾಸ್ಕ್ ವಿತರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಅಭಿಯಾನ ತಂಡ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಾಂಡು, ಹೋಂಸ್ಟೇ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅನಂತ ಶಯನ, ಗ್ರೀನ್ ಸಿಟಿ ಫೋರಂ ಸಂಸ್ಥಾಪಕ ಚೈಯ್ಯಂಡ ಸತ್ಯ ಸೇರಿದಂತೆ ಇನ್ನಿತರರು ಉಪಸ್ಥಿತ ರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಆರ್. ಅಶೋಕ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು.