ಮಡಿಕೇರಿ, ಜು. ೬: ಜಿಲ್ಲಾ ಪಂಚಾಯಿತಿ, ಸಮಗ್ರ ಗಿರಿಜನ ಯೋಜನೆಯಡಿಯಲ್ಲಿ ೨೦೨೧-೨೨ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರನ್ನು ನ್ಯಾಯವಾಧಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ತರಬೇತಿ ಭತ್ಯೆಗೆ ಆಯ್ಕೆ ಮಾಡಲು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೧೪ ರವರೆಗೆ ಅವಧಿ ನೀಡಲಾಗಿದ್ದು, ಇಲಾಖಾ ವೆಬ್ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ಅರ್ಜಿ ಸಲ್ಲಿಸಿ. ಸಲ್ಲಿಸಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಯು ಪರಿಶಿಷ್ಟ ಪಂಗಡದ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ವಯಸ್ಸು ೪೦ ವರ್ಷ ಮೀರಿರಬಾರದು. ಅಭ್ಯರ್ಥಿಯ ಮತ್ತು ಪೋಷಕರ ಆದಾಯ ರೂ. ೨.೫೦ ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲಾದ ಕೊನೆಯ ದಿನಾಂಕಕ್ಕೆ ಮೊದಲು ಅಭ್ಯರ್ಥಿಯು ಯಾವುದೇ ಪದವಿಯ ನಂತರ ಕಾನೂನು ಪದವಿ ಅಥವಾ ಪಿ.ಯು.ಸಿ.ಯ ನಂತರ ೫ ವರ್ಷಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಕನಿಷ್ಟ ೧೫ ವರ್ಷ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು.
ಅರ್ಜಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ ೨ ವರ್ಷದೊಳಗೆ ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್ರೋಲ್ಮೆಂಟ್ ಫೀಯನ್ನು ನೀಡತಕ್ಕದ್ದು. ಸುಳ್ಳು ದಾಖಲಾತಿ ನೀಡುವ ಅಭ್ಯರ್ಥಿಗಳಿಗೆ ಕಾನೂನಾತ್ಮಕ ಶಿಕ್ಷೆ ಹಾಗೂ ತರಬೇತಿ ಅವಧಿಯಲ್ಲಿ ನೀಡಲಾದ ಶಿಷ್ಯವೇತನದ ಶೇ. ೧೦ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ತರಬೇತಿಗೆ ಅಯ್ಕೆಯದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ೧೩೫ ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (೨ ವರ್ಷಗಳ ತರಬೇತಿಗೆ ೧ ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರು ಮಾಡಿ, ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೦೦೫೦೦, ೦೮೨೭೪-೨೬೧೨೬೧, ೦೮೨೭೨-೨೨೩೫೫೨, ೦೮೨೭೬-೨೮೧೧೧೫ ಅಥವಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ, ತಾಲ್ಲೂಕು ಪರಿಶಿಷ್ಟ ಕಲ್ಯಾಣಾಧಿಕಾರಿ ಕಚೇರಿ ಪೊನ್ನಂಪೇಟೆ, ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ, ಸಹಾಯಕ ನಿರ್ದೇಶಕರು (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಇಲ್ಲಿ ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಪ್ರವೇಶ, ಕಾವ ಜಾಣ, ರತ್ನ ಪರೀಕ್ಷೆಗಳಿಗೆ
ಕನ್ನಡ ಸಾಹಿತ್ಯ ಪರಿಷತ್ತು ೨೦೨೧-೨೨ನೇ ಸಾಲಿನ ಕನ್ನಡ ಪ್ರವೇಶ, ಕಾವ ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆಗಳು ೨೦೨೧ನೇ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಆಸಕ್ತರು ಆಗಸ್ಟ್ ೩೧ ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ತಪ್ಪಿದ್ದಲ್ಲಿ ಸೆಪ್ಟೆಂಬರ್ ೧೫ ರವರೆಗೆ ರೂ. ೫೦ ದಂಡ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು. ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ (ಬೆಂಗಳೂರು) ರೂ. ೨೫ ಶುಲ್ಕ ಪಾವತಿಸಿ ಪಡೆಯಬಹುದಾಗಿದೆ. ಇಲ್ಲವಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ರೂ. ೩೦ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ತಲುಪಿಸಲಾಗುತ್ತದೆ. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ, ಬೆಂಗಳೂರು-೧೮ ಹಾಗೂ ತಿತಿತಿ.ಞಚಿsಚಿಠಿಚಿ.iಟಿ ಜಾಲತಾಣದಲ್ಲಿ ಅಥವಾ ದೂ. ೦೮೦-೨೬೬೨೩೫೮೪ಗೆ ಕರೆ ಮಾಡಿ ಮಾಹಿತಿ ಪಡೆಯಬಹುದೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮರಾಜ ದಂಡಾವತಿ ತಿಳಿಸಿದ್ದಾರೆ.