*ಗೋಣಿಕೊಪ್ಪ, ಜು. ೬: ಗೋಣಿಕೊಪ್ಪ ಸರಕಾರಿ ಪ್ರೌಢಶಾಲೆ ವತಿಯಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲೆಯ ಪ್ರವೇಶದ್ವಾರಕ್ಕೆ ತಳಿರು ತೋರಣಗಳಿಂದ ಶೃಂಗರಿಸಿ ವಿದ್ಯಾರ್ಥಿಗಳ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿದರು.
ಎಸ್ಡಿಎಂಸಿ ಅಧ್ಯಕ್ಷ ಜಮೀಲಾ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಪ್ರಬಾರ ಮುಖ್ಯ ಶಿಕ್ಷಕಿ ಅರುಣ್ ಅ್ಯನ್ಸಿ ಡಿಸೌಜ, ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿಶ್ವರಿ, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಶಿಕ್ಷಕರು ಹಾಜರಿದ್ದರು.