ಸಿದ್ದಾಪುರ, ಜು. ೬: ಭಾರತೀಯ ಜನಸಂಘದ ಸ್ಥಾಪಕ ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ನೆಲ್ಯಹುದಿಕೇರಿ ಬಿಜೆಪಿ ಯುವಮೊರ್ಚಾ ಹಾಗೂ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವೃಕ್ಷಾರೋಹಣ ಕಾರ್ಯಕ್ರಮ ನೆಲ್ಯಹುದಿಕೇರಿಯ ಶ್ರೀ ಸತ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಭಾರತಾಂಬೆ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಸಲ್ಲಿಸಲಾಯಿತು. ಈ ಸಂದರ್ಭ ಬಿಜೆಪಿ ದಕ್ಷಿಣ ಕನ್ನಡ ಪ್ರಭಾರಿ ಬಿ ಬಿ ಭಾರತೀಶ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ತ್ಯಾಗ, ಬಲಿದಾನವನ್ನು ಸ್ಮರಿಸಿದರು. ನಂತರ ವೃಕ್ಷಾರೋಹಣದ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಕಲ್ಪವೃಕ್ಷದ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ದರ್ಶನ್ ಜೋಯಪ್ಪ, ಜಿಲ್ಲಾ ಸಮಿತಿ ಸದಸ್ಯ ಶರಣ್, ಯುವ ಮೋರ್ಚಾ ಸೋಮವಾರಪೇಟೆ ಮಂಡಲ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಸೋಮವಾರಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಪಧ್ಮನಾಭ, ನೆಲ್ಯಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಬೆಳ್ಳಿಯಪ್ಪ, ಸಹ ಪ್ರಮುಖ್ ಪ್ರಮೋ
ದ್, ಯುವ ಮೋರ್ಚಾ ಅಧ್ಯಕ್ಷ ಸಚಿನ್, ಕೃಷಿ ಮೋರ್ಚಾ ಅಧ್ಯಕ್ಷ ಟಿ.ಜಿ ಚಂದ್ರಶೇಖರ್, ಗ್ರಾ.ಪಂ. ಉಪಾಧ್ಯಕ್ಷೆ ದಮಯಂತಿ, ಸದಸ್ಯರಾದ ಸುಜಾತ, ಸತ್ಯನಾರಾಯಣ ದೇವಸ್ಥಾನ ಕಾರ್ಯದರ್ಶಿ ಗಣೇಶ್ ಹಾಗೂ ಪಕ್ಷದ ಪ್ರಮುಖರು ಹಾಜರಿದ್ದರು.