ಸೋಮವಾರಪೇಟೆ, ಜು.೭: ರಾಷ್ಟçದಾದ್ಯಂತ ಎಲ್ಲಾ ನ್ಯಾಯಾಲಯ ಗಳಲ್ಲಿ ತಾ. ೧೪ರಂದು ಬೃಹತ್ ಲೋಕ ಅದಾಲತ್ ನಡೆಯಲಿದ್ದು, ಇದರಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ದಾವೆಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕೆAದು ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಸೂಚನೆ ನೀಡಿದರು.
ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಾಲಯ ಗಳಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ಅನೇಕ ಪ್ರಕರಣಗಳಿದ್ದು, ಇಂತಹವುಗಳನ್ನು ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖಾಧಿಕಾರಿಗಳು ಕ್ರಮವಹಿಸಬೇಕೆಂದು ತಿಳಿಸಿದರು.
ಸಾರ್ವಜನಿಕರು ತಮ್ಮ ದಾವೆಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದೆ ಬರಬೇಕು. ಅದಾಲತ್ನ ಉದ್ದೇಶವನ್ನು ಮನಗಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ ಅವರು ಅಭಿಪ್ರಾಯಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜು, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಣ್ಣಯ್ಯ, ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಪರಶಿವಮೂರ್ತಿ, ಬಿ.ಜಿ. ಮಹೇಶ್, ಸುಂಟಿಕೊಪ್ಪ ಎಸ್.ಐ. ಪುನೀತ್, ಆರ್ಎಫ್ಓಗಳಾದ ಶಮಾ, ಪ್ರಫುಲ್ ಶೆಟ್ಟಿ, ಅಬಕಾರಿ ಉಪನಿರೀಕ್ಷಕಿ ಚೈತ್ರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರೋಜಾ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಪದ್ಮನಾಭ್ ಅವರುಗಳು ಭಾಗವಹಿಸಿದ್ದರು.