ಮಡಿಕೇರಿ, ಜು. ೭: ಜಿಲ್ಲೆಯಲ್ಲಿ ಬುಧವಾರ ೧೧೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೪೫, ಸೋಮವಾರಪೇಟೆ ತಾಲೂಕಿನಲ್ಲಿ ೪೨, ವೀರಾಜಪೇಟೆ ತಾಲೂಕಿನಲ್ಲಿ ೨೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೨೩೯ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೭೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು ೨೮,೯೯೭ ಮಂದಿ ಗುಣಮುಖರಾಗಿದ್ದಾರೆ. ೮೬೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩ ಸಾವು ಉಂಟಾಗಿದ್ದು,. ಒಟ್ಟು ೩೮೦ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೬೩ ಆಗಿದೆ. ಇಂದಿನ ಕೋವಿಡ್ ಪಾಸಿಟಿವಿಟಿ ದರ ಶೇ.೪.೮೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.