ಸಿದ್ದಾಪುರ, ಜು. ೮: ತೈಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ನೆಲ್ಯಹುದಿಕೇರಿ ಅಂಚೆ ಕಚೇರಿಯ ಎದುರು ಡಿ.ವೈ.ಎಫ್.ಐ. ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಯಿತು.

ಗ್ರಾಮ ಪಂಚಾಯಿತಿ ಸದಸ್ಯ ಮೊಣ್ಣಪ್ಪ ಮಾತನಾಡಿ, ಕೇಂದ್ರ ಸರಕಾರವು ಏಕಾಏಕಿ ಜನಸಾಮಾನ್ಯರು ಬಳಸುವ ಅಡುಗೆ ಅನಿಲ ಹಾಗೂ ತೈಲ ಉತ್ಪನ್ನಗಳ ಬೆಲೆಯನ್ನು ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬಡ ಜನರ ಜೀವನ ದುಸ್ತರವಾಗಿದೆ ಎಂದು ಆರೋಪಿಸಿದರು. ಕೂಡಲೇ ಕೇಂದ್ರ ಸರಕಾರವು ತೈಲ ಉತ್ಪನ್ನಗಳ ಬೆಲೆಯನ್ನು ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಡಿ.ವೈ.ಎಫ್.ಐ ಸಂಘಟನೆಯ ಪದಾಧಿಕಾರಿಗಳಾದ ರಾಶೀದ್, ಸುನಿಲ್. ರವಿ, ರಮ್ಯ, ಜ್ಯೋತಿ, ರಾಣಿ, ವಾಸು, ಕೃಷ್ಣ ಇನ್ನಿತರರು ಹಾಜರಿದ್ದರು.