ಸೋಮವಾರಪೇಟೆ, ಜು. ೯: ಕೊಡಗು ಸೇರಿದಂತೆ ಮೈಸೂರು, ಚಾಮರಾಜನಗರದ ಗ್ರಾಮೀಣ ಭಾಗದಲ್ಲಿ ಮತಾಂತರ ಪ್ರಕರಣ ಹೆಚ್ಚಾಗಿದ್ದು, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುವಂತೆ ಜಿಲ್ಲೆಯ ವಕೀಲರನ್ನು ಒಳಗೊಂಡAತೆ ಹೈಕೋರ್ಟ್ನ ಕೆಲ ಯುವ ವಕೀಲರು ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಕೀಲರಾಗಿರುವ ಪಟ್ಟಣದ ನಿವಾಸಿ ಶ್ರೀನಿಧಿ ಲಿಂಗಪ್ಪ ಅವರನ್ನೊಳಗೊಂಡ

(ಮೊದಲ ಪುಟದಿಂದ) ತಂಡ ಈ ಬಗ್ಗೆ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದು, ಇದರಲ್ಲಿ ಕೊಡಗಿನ ಹಾಡಿಗಳಲ್ಲಿ ವಾಸವಿರುವ ಕಾಡುಕುರುಬರು, ಯರವರಿಗೆ ವಿವಿಧ ಆಮಿಷಗಳನ್ನು ಒಡ್ಡಿ ಮತಾಂತರ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ಮಾನಸಿಕವಾಗಿ ದುರ್ಬಲರಾಗಿರುವ, ಆರ್ಥಿಕವಾಗಿ ಹಿಂದುಳಿದವರಿಗೆ ವಿವಿಧ ಆಮಿಷ ನೀಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊAಡವರು ಗುರುತಿನ ಚೀಟಿಯಲ್ಲಿ ಕ್ರಿಶ್ಚಿಯನ್ ಎಂದು ನಮೂದಿಸದಂತೆ ಸೂಚನೆ ನೀಡಲಾಗುತ್ತಿದೆ. ಸರ್ಕಾರದ ಎಸ್.ಸಿ. ಎಸ್.ಟಿ ಸವಲತ್ತುಗಳನ್ನು ಪಡೆದುಕೊಂಡು ಕ್ರಿಶ್ಚಿಯನ್ ಧರ್ಮ ಪಾಲನೆ ಮಾಡುವಂತೆ ನಿರ್ದೇಶನ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬುಡಕಟ್ಟು ಜನರ ಮುಗ್ಧತೆಯನ್ನು ದುರ್ಬಳಕೆ ಮಾಡಿಕೊಂಡು ಮತಾಂತರ ನಡೆಸುತ್ತಿರುವ ಮಿಷನರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕು. ಇದರಲ್ಲಿ ವಿದೇಶಗಳ ಕೈವಾಡವೂ ಇದ್ದು, ಭಾರತವನ್ನು ದುರ್ಬಲಗೊಳಿಸುವ ಸಂಚು ಅಡಗಿದೆ. ಇಂತಹ ಮತಾಂತರ ಮುಂದೊAದು ದಿನ ದೇಶಕ್ಕೆ ಮಾರಕವಾಗುವ ಸಂಭವವಿದೆ. ಈಗಾಗಲೇ ದೇಶದ ಅನೇಕ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಕರ್ನಾಟಕದಲ್ಲೂ ಇದನ್ನು ಜಾರಿಗೆ ತರಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಇತರ ರಾಜ್ಯಗಳಲ್ಲಿರುವ ಮತಾಂತರ ನಿಷೇಧ ಕಾಯ್ದೆಯ ಸಮಗ್ರ ಮಾಹಿತಿ ತರಿಸಿಕೊಂಡು ರಾಜ್ಯದಲ್ಲಿ ಅನುಷ್ಠಾನಕ್ಕೆ ತರುವ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರುವ ವಿಶ್ವಾಸವಿದೆ ಎಂದು ವಕೀಲ ಶ್ರೀನಿಧಿ ಲಿಂಗಪ್ಪ ತಿಳಿಸಿದ್ದಾರೆ.