ಸರಕಾರ ವಿನಾಯಿತಿ ಘೋಷಣೆ ಮಾಡಿದ್ದರೂ ಸ್ಥಳೀಯವಾಗಿ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಆದರೆ ಜಿಲ್ಲಾಡಳಿತದಿಂದ ಯಾವುದೇ ಅಧಿಕೃತ ಆದೇಶ ಬಾರದಿರುವುದರಿಂದ ಹೊಟೇಲ್ ಉದ್ಯಮಿಗಳು ಹೊಟೇಲ್ ತೆರೆಯಬೇಕೇ, ಬಸ್ ಸಂಚಾರ ಆರಂಭಿಸಬೇಕೇ ಎಂಬ ಬಗ್ಗೆ ಸಾರಿಗೆ ಸಂಸ್ಥೆಯವರು ಹಾಗೂ ಖಾಸಗಿ ಬಸ್ ಮಾಲೀಕರು ಗೊಂದಲದಲ್ಲಿ ಮುಳುಗಿದ್ದಾರೆ.